ಕುಸ್ತಿ-ರಾಜ್ಯ ಮಟ್ಟಕ್ಕೆ ಆಯ್ಕೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ಚಡಚಣ: ಇತ್ತಿಚೆಗೆ ಕಲಕೇರಿಯ ಎ.ಕೆ.ಸಿರಸಗಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ೭೦ ಕೆಜಿ ವಿಭಾಗದಲ್ಲಿ ಚಡಚಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಸಂಕೇತ ಅಲದಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಮನೋಜ ಕಟಗೇರಿ, ದೈಹಿಕ ಉಪನ್ಯಾಸಕ ಶಿವಾನಂದ ಜಿಗಜೇವಣ ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.