ಅಪರಾಧಕ್ಕೆ ಸವಾಲು ಯುಗಾದಿ ವಿಶೇಷಾಂಕ ಬಿಡುಗಡೆಗೊಳಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್ ಸಿ ಮಹದೇವಪ್ಪ

ಬೆಂಗಳೂರು : ಹಿರಿಯ ಪತ್ರಿಕೋದ್ಯಮಿ ಟಿ ಕೆ ಮಲಗೊಂಡ ಸಂಪಾದಕತ್ವದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ ಹೊರತಂದಿರುವ "ಯುಗಾದಿ ವಿಶೇಷಾಂಕ -೨೦೨೫" ವನ್ನು ಗುರುವಾರ ವಿಧಾನಸೌಧದ ಬ್ಲಾಂಕೇಟ ಹಾಲ್‌ನಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಅಧಿಕೃತವಾಗಿ ಬಿಡುಗೊಳಿಸಿದರು.
ನಂತರ ವಿಶೇಷಾಂಕ ನೋಡಿದ ಸಚಿವರು ವಿಶೇಷಾಂಕದ ಮುಖಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರ ಮುದ್ರಣಗೊಂಡಿದ್ದು ನೋಡಿ ಖುಷಿಪಟ್ಟರು. ವಿಶೇಷಾಂಕದಲ್ಲಿ ಕರ್ನಾಟಕ ಸರ್ಕಾರದ ಸಾಧಕರ ವಿಶೇಷ ಲೇಖನ ಬರಹಗಳು ತುಂಬಾ ಅಚ್ಚುಕಟ್ಟಾಗಿ ಮೂಡಿಬಂದಿವೆ ಎಂದು ಹರ್ಷ ವ್ಯಕ್ತಪಡಿಸಿದರು.
ಯುಗಾದಿ ವಿಶೇಷಾಂಕದ ಮುಖಪುಟದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ಕಾರ್ಮಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ.ಸಂಗಮೇಶ ಉಪಾಸೆ, ಏಷ್ಯಾನೇಟ್ ಸುವರ್ಣನ್ಯೂಸ್ ನಿರೂಪಕಿ ಭಾವನಾ ನಾಗಯ್ಯ, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ ನಿಂಬರಗಿ ಅವರ ಭಾವಚಿತ್ರಗಳಿವೆ.
ಈ ಸಂದರ್ಭದಲ್ಲಿ ಸಂಪಾದಕ ಟಿ ಕೆ ಮಲಗೊಂಡ ಪತ್ರಕರ್ತ ಗುರುರಾಜ ಹೂಗಾರ ಇದ್ದರು.