ಇಂಡಿ ಶಿಕ್ಷಕಿ ರೇಷ್ಮಾ ಪವಾರಗೆ "ರಾಜ್ಯಮಟ್ಟದ ಉತ್ತಮ ಶಿಕ್ಷಕ" ಪ್ರಶಸ್ತಿ ಪ್ರದಾನ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ಇಂಡಿ : ಜನಸಿರಿ ಫೌಂಡೇಶನ (ರಿ) ಟ್ರಸ್ಟ ಬೆಂಗಳೂರ ವತಿಯಿಂದ ಅರ್ಪಿಸುವ ರಾಜ್ಯಮಟ್ಟದ ಶಿಕ್ಷಕರ ಹಬ್ಬ - 2024 ಕಾರ್ಯಕ್ರಮ ಪುಟ್ಟಣ್ಣ ಚೆಟ್ಟಿ ಪುರಭವನ ಟೌನ್ ಹಾಲ್ ನಲ್ಲಿ ಆಯೋಜಿಸಿರುವ ಅದ್ದೂರಿ ಸಮಾರಂಭದಲ್ಲಿ 'ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ' ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಾಳಸಂಗಿ ಗ್ರಾಮದ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಕುಮಾರಿ ರೇಷ್ಮಾ ಪವಾರ ಅವರಿಗೆ "ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ" ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪಡೆದ ಹಿನ್ನೆಲೆ ಎಮ್.ಪಿ.ಎಸ್.ಲಾಳಸಂಗಿ ಶಾಲೆಯ ಎಸ್.ಡಿ.ಎಮ್.ಸಿ.ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಮುಖ್ಯಗುರುಗಳು ಹಾಗೂ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಊರಿನ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.