ವಸತಿನಿಲಯಗಳ ಸಮರ್ಪಕ ನಿರ್ವಹಣೆಗೆ ಜಿ.ಪಂ. ಸಿಇಒ ರಿಷಿ ಆನಂದ ಸೂಚನೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ವಿಜಯಪುರ : ಪ್ರತಿ ದಿನ ವಸತಿ ನಿಲಯದ ಅಡುಗೆ ಕೋಣೆ, ಭೋಜನಾಲಯ, ದಾಸ್ತಾನು ಕೊಠಡಿ, ಶೌಚಾಲಯ, ಸ್ನಾನದ ಗೃಹಗಳು, ಶುದ್ಧ ಕುಡಿಯುವ ನೀರಿನ ಘಟಕ ಈ ಎಲ್ಲ ವ್ಯವಸ್ಥೆಗಳನ್ನು ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದÀ ಸೂಚನೆ ನೀಡಿದರು.
ಅವರು ವಿಜಯಪುರ ನಗರದ ಭೂತನಾಳ ಕ್ರಾಸ್ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಶುಕ್ರವಾರ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸತಿ ನಿಲಯದ ಹೊರಾಂಗಣ ಆವರಣ, ಆಹಾರ ದಾಸ್ತಾನು ಕೊಠಡಿ, ನೀರಿನ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕ ವ್ಯವಸ್ಥೆಗಳನ್ನು ಸ್ವಚ್ಛತೆಯಿಂದ ಇರುವಂತೆಯೂ ಮತ್ತು ನಿರ್ವಹಣೆ ಉತ್ತಮವಾಗಿರಬೇಕು ವಸತಿ ನಿಲಯದ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬAಧಿಸಿದAತೆ ಉತ್ತಮ ಪುಸ್ತಕಗಳನ್ನು ಹಾಗೂ ದಿನಪತ್ರಿಕೆಗಳು, ಮಾಸ ಪತ್ರಿಕೆಗಳು, ಉದ್ಯೋಗ ಮಿತ್ರ ಹೀಗೆ ಮುಂತಾದ ಪುಸ್ತಕಗಳನ್ನು ಪೂರೈಸಬೇಕು, ಗಣಕಯಂತ್ರ ಕೊಠಡಿಗಳಲ್ಲಿ ಕಡ್ಡಾಯವಾಗಿ ಇಂಟರ್ನೆಟ್ ವ್ಯವಸ್ಥೆ ಮಾಡಿ ನಿಲಯದ ವಿದ್ಯಾರ್ಥಿಳಿಗೆ ಪ್ರತಿ ಮಾಹೆಯಾನ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕ್ರಮವಹಿಸಿಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಿಬೇಕು ಎಂದು ವಸತಿ ನಿಲಯದ ಮೇಲ್ವಿಚಾರಕರಿಗೆ ಸೂಚಿಸಿದರು. ಸ್ನಾನದ ಗೃಹಗಳು ಮತ್ತು ಶೌಚಾಲಯ ಕಾಮಗಾರಿ ತ್ವರಿತಗತಿಯಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದ ಆಹಾರವನ್ನು ಮೆನುವಿನಂತೆ ತಯಾರಿಸಿ ನಿಗದಿತ ಸಮಯಾನುಸಾರ ವಿದ್ಯಾರ್ಥಿಗಳಿಗೆ ಊಟ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ಇಲ್ಲಿ ನೀಡುವ ಸೌಲಭ್ಯ ಸದುಪಯೋಗಪಡಿಸಿಕೊಂಡು ಉತ್ತಮವಾಗಿ ಶಿಕ್ಷಣ ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ವಸತಿ ನಿಲಯದಲ್ಲಿ ಕಸ ವಿಲೇವಾರಿಗೆ ಕಸದ ಬುಟ್ಟಿಗಳನ್ನು ವ್ಯವಸ್ಥಿತವಾಗಿ ಇರಿಸಿರುವುದು, ನಿಲಯದ ಸ್ವಚ್ಛತೆ ಕಂಡು ಹರ್ಷ ವ್ಯಕ್ತಪಡಿಸಿದರು. ಇದೇ ರೀತಿ ಮುಂಬರುವ ದಿನಗಳಲ್ಲಿಯೂ ಸಹ ವಸತಿ ನಿಲಯವನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಕೆ. ಗೋಠೆ, ಉಪಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕರಾದ ಸಿ.ಬಿ. ದೇವರಮನಿ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ ಮಾನವರ, ಸಹಾಯಕ ನಿರ್ದೇಶಕರಾದ ಬಿ.ಜೆ. ಇಂಡಿ, ನಿಲಯ ಪಾಲಕರಾದ ಆನಂದ ಕಳಸಗೊಂಡ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.