ಶಾಲಾ-ಕಾಲೇಜಿನ ೧೦೦ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ವಿಜಯಪುರ : ಜಿಲ್ಲೆಯಾದ್ಯಂತ ಇರುವ ಶಾಲಾ ಕಾಲೇಜಿನ ಕಂಪೌಂಡಿನಿಂದ ೧೦೦ ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಪದಾರ್ಥಗಳ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲಾ ಕಾಲೇಜು ಆವರಣದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಬಳಕೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಂದು ಶಾಲಾ-ಕಾಲೇಜುಗಳು ಇದರ ಬಗ್ಗೆ ದೃಢೀಕರಣವನ್ನು ನೀಡಬೇಕು. ಬಾಕಿ ಇರುವ ಶಾಲಾ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿ ಈ ಕಾಯ್ದೆಯನ್ನು ಅನಿಷ್ಠಾನಗೊಳಿಸುವ ಬಗ್ಗೆ ಕ್ರಮಕೈಗೊಂಡು ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ತಂಬಾಕು ಉತ್ಪನ್ನಗಳ ಉಪಯೋಗದಿಂದಾಗುವ ದುಷ್ಟರಿಣಾಮ ಹಾಗೂ ಕೊಟ್ಪಾ ಕಾಯ್ದೆ ಕುರಿತು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ತನಿಖಾದಳ ರಚಿಸಿಕೊಂಡು ಕ್ರೀಯಾಶೀಲತೆಯಿಂದ ಕಾಲ-ಕಾಲಕ್ಕೆ ದಾಳಿ ನಡೆಸಬೇಕು. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತಂಬಾಕು ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಎಲ್ಲ ಬಸ್ ನಿಲ್ದಾಣ ಆವರಣದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಅವರು ಹೇಳಿದರು.
ತಂಬಾಕು ಮಾರಾಟ ಅಂಗಡಿಗಳ ಮುಂದೆ ಕೊಟ್ಪಾ ಕಾಯ್ದೆಯ ಸೆಕ್ಸೆನ್ ೪ ಹಾಗೂ ೬ಎ ನಾಮಫಲಕಗಳನ್ನು ಪ್ರದರ್ಶಿಸಿರುವುದನ್ನು ಹಾಗೂ ಅಂಗಡಿ ಮಾಲೀಕರು ಕೋಟ್ಪಾ ಕಾಯ್ದೆಯನ್ನು ಕಡ್ಡಾಯ ಅನುಸರಿಸುವಂತೆ ತಿಳಿಹೇಳಬೇಕು. ತಹಶೀಲ್ದಾರಗಳ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ತನಿಖಾಧಿಕಾರಿಗಳೊಂದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಅಂತರ ಇಲಾಖಾ ಸಮನ್ವಯ ಸಭೆ ನಡೆಸಿ ತಾಲೂಕ ಆರೋಗ್ಯಾಧಿಕಾರಿಗಳು ತಂಡದೊAದಿಗೆ ಆಗಾಗ ದಾಳಿ ನಡೆಸಬೇಕು ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ, ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಎಸ್.ಎಲ್.ಲಕ್ಕಣ್ಣವರ, ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಅಪ್ಪಾಸಾಹೇಬ ಇನಾಮದಾರ್, ಕ್ಷಯರೋಗ ನಿಯಂತ್ರಣಾಧಿಕಾರಿ ಎಂ.ಬಿ. ಬಿರಾದಾರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಜಾನ್ ಕಟವಟೆ, ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.