ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಮುಖಂಡ ಸಚಿನಗೌಡ.

Jan 6, 2025 - 08:31
 0
ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಮುಖಂಡ ಸಚಿನಗೌಡ.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 30 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರ ಅನುಪಸ್ಥಿತಿಯಲ್ಲಿ ಅವರ ಸಹೋದರರಾದ ಸಚಿನಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿದರು.

ಪಟ್ಟಣದಲ್ಲಿ ಇತ್ತೀಚಿಗೆ ಸನ್ 2023-24ನೇ ಸಾಲಿನ ಸ್ವಚ್ಛ ಭಾರತ್ ಮಿಷನ್(ನಗರ)2.0 ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಶೌಚಾಲಯ ಕಾಮಗಾರಿಗೆ ಶಾಸಕರ ಅನುಪಸ್ಥಿತಿಯಲ್ಲಿ ಪ.ಪಂ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಬಸವರಾಜ ದೇವಣಗಾಂವ ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ ನೇತೃತ್ವದಲ್ಲಿ ಸಾರ್ವಜನಿಕ ಶೌಚಾಲಯಗಳಲ್ಲಿ ಚಾಲನೆ ನೀಡಿ ಮಾತನಾಡಿದ ಅವರು. ಮತಕ್ಷೇತ್ರ ಹಾಗೂ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಾಸಕರು ತಮ್ಮದೇ ಆದ ಕನಸಿನ ಯೋಜನೆಗಳನ್ನು ರೂಪಿಸಿದ್ದಾರೆ. ಅಭಿವೃದ್ಧಿ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ಪಟ್ಟಣದ ಜನರಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸಲು ಪ.ಪಂ ಅಧ್ಯಕ್ಷೆ ,ಉಪಾಧ್ಯಕ್ಷರು ಸರ್ವ ಸದಸ್ಯರು ಅಧಿಕಾರಿಗಳ ಸಹಕಾರದಿಂದ ಬರುವಂತ ದಿನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಬದ್ಧರಾಗಿದ್ದಾರೆ ಎಂದು ಹೇಳಿದರು.

ಯುವ ಮುಖಂಡ ಸೋಮನಾಥ ದೇವೂರ ಅವರು ಮಾತನಾಡಿ, ಪಟ್ಟಣದಲ್ಲಿ ಶೌಚಾಲಯ ಕೊರತೆಯಿಂದ ಐತಿಹಾಸಿಕ ರಾವುತರಾಯ ಮುಲ್ಲಯ್ಯನ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಈ ಸಮಸ್ಯೆಯನ್ನು ಪರಿಹರಿಸಿ ದೇವಸ್ಥಾನದ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ.ಪಂ ಸದಸ್ಯರಾದ ರತ್ನಬಾಯಿ ದೇವೂರ ಅವರ ಪ್ರಯತ್ನದಿಂದ ಇಂದು ಭೂಮಿ ಪೂಜೆ ನೆರವೇರಿಸಲಾಗಿದೆ. ನಾಲ್ಕನೇ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ವಾರ್ಡ್ ಜನರ ಪರವಾಗಿ ಧನ್ಯವಾದಗಳು ತಿಳಿಸಿದರು.

ನಂತರ ಶಾಸಕರ ಪರವಾಗಿ ಅವರ ಸಹೋದರ ಸಚೀನಗೌಡರಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮನವಿ ಪತ್ರ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರಾದ ರಿಯಾಜ ಯಲಗಾರ,ಪ.ಪಂ ಸದಸ್ಯರಾದ ಕಾಸುಗೌಡ ಬಿರಾದಾರ (ಜಲಕತ್ತಿ), ಶಾಂತಯ್ಯ ಜಡಿಮಠ, ಪ್ರಕಾಶ ಮಲ್ಲಾರಿ, ಸುಮಂಗಲಾ ಸೇಬೇನವರ, ರಾಜು ಮೇಟಗಾರ,ಮುಖಂಡರುಗಳಾದ ವೀರೇಶ ಕುದುರಿ,ವಿನೋದ ಗೌಡ ಪಾಟೀಲ, ಶ್ರೀಶೈಲ ದೇವರಮನೆ, ಪ್ರವೀಣ ಗುಂದಗಿ, ಸಂಗಪ್ಪ ತಡವಲಗ, ಮಡಿವಾಳಪ್ಪ ದೇವರಮನಿ, ಸಂಗು ಯಂಭತ್ನಾಳ, ಶಂಕರ ಜಮಾದಾರ, ರಮೇಶ ಮ್ಯಾಕೇರಿ,ಸೇರಿದಂತೆ ಸದಸ್ಯರು, ಸಿಬ್ಬಂದಿ ವರ್ಗ, ಪಟ್ಟಣದ ಪ್ರಮುಖರು, ಗಣ್ಯರು ಹಾಗೂ ಇತರರು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ ವಿಜಯಪುರದ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.