ಸಿಂದಗಿ: ಶಾಲಾ ವಿದ್ಯಾರ್ಥಿಗಳಿಗೆ 15 ದಿನಗಳ ಉಚಿತ ರಂಗ ತರಬೇತಿ ಶಿಬಿರ

Sep 30, 2024 - 06:26
 0
ಸಿಂದಗಿ: ಶಾಲಾ ವಿದ್ಯಾರ್ಥಿಗಳಿಗೆ 15 ದಿನಗಳ ಉಚಿತ ರಂಗ ತರಬೇತಿ ಶಿಬಿರ
ಮಾಧ್ಯಮರಂಗ ಫೌಂಡೇಶನ್ ಅಧ್ಯಕ್ಷ ನಾಗೇಶ ತಳವಾರ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ವಿಜಯಪುರ: ಮಾಧ್ಯಮರಂಗ ಫೌಂಡೇಶನ್ ವತಿಯಿಂದ ಸಿಂದಗಿಯಲ್ಲಿ 2024 ಅಕ್ಟೋಬರ್ 5ರಿಂದ 20ರ ತನಕ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ರಂಗ ತರಬೇತಿ ಶಿಬಿರ ಹಮ್ಮಿಕೊಂಡಿದೆ. ಸಿಂದಗಿ ಪಟ್ಟಣದ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 5ರಿಂದ 9ನೇ ತರಗತಿ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು. ಇಲ್ಲಿ ಅಭಿನಯ, ನೃತ್ಯ, ಹಾಡು, ರೂಪಕ ಸೇರಿದಂತೆ ರಂಗಭೂಮಿಯ ವಿವಿಧ ಚಟುವಟಿಕೆಗಳನ್ನು ಕಲಿಸಿಕೊಡಲಾಗುತ್ತೆ ಎಂದು ಫೌಂಡೇಶನ್ ಅಧ್ಯಕ್ಷ ನಾಗೇಶ ತಳವಾರ ತಿಳಿಸಿದ್ದಾರೆ.

ಪಟ್ಟಣದಲ್ಲಿರುವ ತಹಶೀಲ್ದಾ‌ರ್ ಕಚೇರಿ ಆವರಣದಲ್ಲಿನ ಸ್ತ್ರೀ ಶಕ್ತಿ ಭವನದಲ್ಲಿ ಪ್ರತಿ ದಿನ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಶಿಬಿರ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಸಾಹಿತ್ಯ, ರಂಗಭೂಮಿ ಸೇರಿದಂತೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಧ್ಯಮರಂಗ ಫೌಂಡೇಶನ್ ಈಗಾಗಲೇ ನಾಡಿನ ಬೇರೆ ಬೇರೆ ಭಾಗಗಳಲ್ಲಿ ತುಂಬಾ ಸೃಜನಶೀಲ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ. ಅದೇ ರೀತಿ ಸಿಂದಗಿಯಲ್ಲಿಯೂ ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡಿದೆ. ಈ ಬಾರಿ ಪಟ್ಟಣದಲ್ಲಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ರಂಗ ತರಬೇತಿ ನೀಡುತ್ತಿದೆ. ಇದರಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ 9035397009 ನಂಬರ್ ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.