ಜಂಬುನಾಥ ಕಂಚ್ಯಾಣಿಗೆ ಡಾ.ಎಚ್ ನರಸಿಂಹಯ್ಯ ಪ್ರಶಸ್ತಿ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ವಿಜಯಪುರ : ಕರ್ನಾಟಕ ವೈಜ್ಞಾನಿಕ ಸಂಶೋಧನ ಪರಿಷತ್ತು, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ವೈಜ್ಞಾನಿಕ ಸಮ್ಮೇಳನದಲ್ಲಿ ಸಾಹಿತಿಗಳಾದ ಜಂಬುನಾಥ ಕಂಚ್ಯಾಣಿ ಇವರಿಗೆ ರಾಜ್ಯಮಟ್ಟದ ಡಾ.ಎಚ್ ನರಸಿಂಹಯ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಗಲೂರಿನ ವಿ ಜೆ ಅಂತರ್ರಾಷ್ಟ್ರೀಯ ಶಾಲೆಯಲ್ಲಿ ಏರ್ಪಡಿಸಿದ್ದ ೪ನೇ ವೈಜ್ಞಾನಿಕ ಸಮ್ಮೇಳನದ ವೇದಿಕೆಯಲ್ಲಿ ಸರ್ವಾಧ್ಯಕ್ಷರಾದ ಮಾಜಿ ಸಚಿವೆ ಶ್ರೀಮತಿ ಉಮಾಶ್ರೀ, ಇಸ್ರೋದ ಮಾಜಿ ಅಧ್ಯಕ್ಷರಾದ ಡಾ.ಕಿರಣಕುಮಾರ ಎ ಎಸ್, ಗೌರವಾಧ್ಯಕ್ಷರಾದ ಡಾ. ಸಿ ಸೋಮಶೇಖರ, ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ,ಸಂಚಾಲಕರಾದ ಬಾಬುರಾವ ದಾನಿ, ಸಂಗಮೇಶ ಬುರ್ಲಿ, ಡಾ.ಉಷಾ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.
ಕಂಚ್ಯಾಣಿಯವರಿಗೆ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ,ಶರಣ ಸಾಹಿತ್ಯ ಪರಿಷತ್ತು,ಡಾ.ಫ ಗು ಹಳಕಟ್ಟಿ ಸಂಶೋಧನ ಕೇಂದ್ರ, ಎ ಎಸ್ ಹಿಪ್ಪರಗಿ ಪ್ರತಿಷ್ಠಾನ, ಮಕ್ಕಳ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಸಮಾನ ಮನಸ್ಕರ ಸೇವಾಸಂಸ್ಥೆ, ಸ್ಪಂದನ ಸಾಹಿತ್ಯಾಸಕ್ತರ ಬಳಗ, ಮುಳವಾಡದ ಮಲ್ಲಿಕಾರ್ಜುನ ವಿದ್ಯಾ ವರ್ಧಕ ಸಂಘದ ಸರ್ವ ಪದಾಧಿಕಾರಿಗಳು ಹಾಗೂ ಶಿಕ್ಷಕ ಬಳಗ ಅಭಿವಂದನೆಗಳನ್ನು ಸಲ್ಲಿಸಿದ್ದಾರೆ.