ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಎಸ್.ಕೃತಿ ಸಾಧನೆ.

Jan 7, 2025 - 07:58
 0
ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಎಸ್.ಕೃತಿ ಸಾಧನೆ.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ದೇವರಹಿಪ್ಪರಗಿ: ಪಟ್ಟಣದ ಡಾ.ಸಿದ್ದು ಭೈರವಾಡಗಿ ಅವರ ಮಗಳಾದ ಕರಾಟೆ ಪಟು ಎಸ್.ಕೃತಿ 07ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಹಾಗೂ ಚಿನ್ನದ ಪದಕ ಗೆದ್ದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. 

ಶಿವಮೊಗ್ಗ ಪಟ್ಟಣದಲ್ಲಿ ಜ-5 ರಂದು ನಡೆದ 2ನೇ ಮುಕ್ತ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜಯಪುರ ಜಿಲ್ಲೆಯ ಯುಥ್ ಮಾರ್ಷಲ್ ಆರ್ಟ್ಸ್ ಶಾಲೆಯ ಪರವಾಗಿ ಕರಾಟೆ ಪಟು ಕಥಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ 25 ಕೆಜಿ ಕುಮಟೆ (ಫೈಟ್) ವಿಭಾಗದಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. 

ಎಸ್.ಕೃತಿ ಕರಾಟೆ ಕ್ರೀಡಾಪಟು ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೇಮಾನಂದ ನಾಗರೇಶಿ, ತರಬೇತಿದಾರ ಸಾಗರ ಎಸ್.ಆರ್ ಸೇರಿದಂತೆ ಪಟ್ಟಣದ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ ವಿಜಯಪುರದ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.