ವಿಜೃಂಭಣೆಯಿಂದ ಜರುಗಿದ ಕರ್ನಾಟಕ ಸಂಭ್ರಮ-50: ಗಡಿನಾಡ ಚೇತನರಿಗೆ ಪ್ರಶಸ್ತಿ ಪ್ರದಾನ

Oct 1, 2024 - 23:45
 0
ವಿಜೃಂಭಣೆಯಿಂದ ಜರುಗಿದ ಕರ್ನಾಟಕ ಸಂಭ್ರಮ-50: ಗಡಿನಾಡ ಚೇತನರಿಗೆ ಪ್ರಶಸ್ತಿ ಪ್ರದಾನ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ವಿಜಯಪುರ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ, ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಸೋಮವಾರ ಕರ್ನಾಟಕ ಸಂಭ್ರಮ-50'ರ ಆಚರಣೆಯ ಜೊತೆಯಲ್ಲಿ ಶ್ರೀಮತಿ ಡಾ.ಜಯದೇವಿ ತಾಯಿ ಲಿಗಾಡೆ" "ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಮತ್ತು "ಡಾ. ಚನ್ನಬಸವ ಪಟ್ಟದ್ದೇವರು ಇವರ ಹೆಸರಿನಲ್ಲಿ ಗಡಿ ಪ್ರಾಧಿಕಾರದಿಂದ ನೀಡುತ್ತಿರುವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಹೊರನಾಡ ಗಡಿ ಕನ್ನಡಿಗರ ಸಮಾವೇಶ ನಡೆಯಿತು.

ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಆಯ್ಕೆ ಮಾಡಿರುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು.

2023-24ನೇ ಸಾಲಿಗೆ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡಿನ ಚೇತನ ಪ್ರಶಸ್ತಿಗೆ ಕಾಸರಗೋಡಿನ ರಾಧಾಕೃಷ್ಣ ಕೆ. ಉಳಿಯತ್ತಡ, ಡಾ. ಜಯದೇವಿ ತಾಯಿ ಲಿಗಾಡೆ ಗಡಿನಾಡ ಚೇತನ ಪ್ರಶಸ್ತಿಗೆ ಬೀದರದ ಪಂಚಾಕ್ಷರಿ ಪುಣ್ಯ ಶೆಟ್ಟಿ, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಯನ್ನು ಬೆಳಗಾವಿಯ ಬಿ.ಎಸ್. ಗವಿಮಠ ಹಾಗೂ 2024-25ನೇ ಸಾಲಿನ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡ ಚೇತನ ಪ್ರಶಸ್ತಿಯನ್ನು ಗುಜರಾತಿನ ಅಹ್ಮದಾಬಾದ್‌ನ ಕರ್ನಾಟಕ ಸಂಘ, ಜಯದೇವಿ ತಾಯಿ ಲಿಗಾಡೆ ಗಡಿನಾಡಿನ ಚೇತನ ಪ್ರಶಸ್ತಿಯನ್ನು ಮಹಾರಾಷ್ಟ್ರ ರಾಜ್ಯದ ಸಂಖದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಉಮದಿಯ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಯನ್ನಹ ಕೇರಳ ರಾಜ್ಯದ ಕಾಸರಗೋಡಿನ ಪೆರಡಾಲ ನೀರ್ಚಾಲು, ಕುಂಬಳೆ (ದಾರಿ) ಮಹಾಜನ ವಿದ್ಯಾಭಿವರ್ಧಕ ಸಂಘಕ್ಕೆ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಹಲ್ಮಿಡಿ ಶಾಸನದ ಮಾದರಿಯ ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ಒಂದು ಲಕ್ಷ ರೂ. ನಗದು ಒಳಗೊಂಡಿದೆ.

ಇದಕ್ಕೂ ಮೊದಲು ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನದಿಂದ ವೇದಿಕೆಯವರೆಗೆ ಡೊಳ್ಳು ಕುಣಿತ,ಕರಡಿ ಮಜಲು,ವೀರಗಾಸೆ,ತಾಸೆ ವಾದನ,ಜಗ್ಗಲಗಿ,ನಂದಿ ಕೋಲು,ಹಾಲಕ್ಕಿ ಸುಗ್ಗಿ ಕುಣಿತ,ಸತ್ತಿಗೆ ಕುಣಿತ,ಗೊಂಬೆ ಕುಣಿತದ ವಿವಿಧ ಜಾನಪದ ಕಲಾ ತಂಡಗಳಿAದ ಮೆರವಣಿಗೆ ನಡೆಯಿತು.

ಮಹಾರಾಷ್ಟ್ರ ರಾಜ್ಯದ ಕನ್ನಡ ಶಾಲೆಗಳಿಗೆ ಕನ್ನಡ ಭಾಷೆಯ 'ನಲಿ-ಕಲಿ' ಕಲಿಕಾ ಸಾಮಗ್ರಿಗಳು ವಿತರಣೆ ಮಾಡಲಾಯಿತು.

 ಸಮಾರಂಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ "ಲಾಂಛನ" ಸಾಕ್ಷ್ಯ ಚಿತ್ರ ಹಾಗೂ ಪ್ರಶಸ್ತಿ ಪುರಸ್ಕೃತರ ಪರಿಚಯಾತ್ಮಕ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವರಾದ ಶಿವರಾಜ್ ಎಸ್.ತಂಗಡಗಿ, ಜವಳಿ, ಕಬ್ಬು ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ,ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ,ಜತ್ತ ಶಾಸಕ ವಿಕ್ರಮಸಿಂಹ ಬಾಳಾಸಾಹೇಬ ಸಾವಂತ, ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ, ಗೀತಾಂಜಲಿ ಪಾಟೀಲ, ಬಾಲ ವಿಕಾಸ ಅಕಾಡೆಮಿಕ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ದಾನಮ್ಮದೇವಿ ಟ್ರಸ್ಟ್ ಅಧ್ಯಕ್ಷ ವಿಜುಗೌಡ ಪಾಟೀಲ, ಎಂ.ಎಸ್.ಮದಭಾವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಎಮ್ ಆರ್ ಪಾಟೀಲ ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರು, ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ಸ್ವಾಗತಿಸಿದರು

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ ವಿಜಯಪುರದ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.