ಕನ್ನಡಿಗರ ಸಮಸ್ಯೆಗಳಿಗೆ ನಮ್ಮ ಸರ್ಕಾರ ಸದಾ ಸ್ಪಂದಿಸಲಿದೆ : ಸಚಿವ ಶಿವಾನಂದ ಪಾಟೀಲ

Oct 1, 2024 - 09:45
Oct 1, 2024 - 10:15
 0
ಕನ್ನಡಿಗರ ಸಮಸ್ಯೆಗಳಿಗೆ ನಮ್ಮ ಸರ್ಕಾರ ಸದಾ ಸ್ಪಂದಿಸಲಿದೆ : ಸಚಿವ ಶಿವಾನಂದ ಪಾಟೀಲ
ಕನ್ನಡಿಗರ ಸಮಸ್ಯೆಗಳಿಗೆ ನಮ್ಮ ಸರ್ಕಾರ ಸದಾ ಸ್ಪಂದಿಸಲಿದೆ : ಸಚಿವ ಶಿವಾನಂದ ಪಾಟೀಲ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 
ವಿಜಯಪುರ : ಬಹಳ ದಿನಗಳ ನಂತರ ಗಡಿಭಾಗದಲ್ಲಿ ಇಂತಹ ಸಾಮರಸ್ಯ ಮೂಡಿಸುವ ಐತಿಹಾಸಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಭಾಷೆ ಬೇರೆ-ಬೇರೆಯಾಗಿದ್ದರೂ ಸಹ ಮನಸ್ಸು ಒಂದೇ ಆಗಿದೆ. ಪ್ರತಿಯೊಬ್ಬರು ನಾವು ಭಾರತೀಯರು ಎಂಬ ಸಂದೇಶ ಸಾರಬೇಕು ಎಂದು ಜವಳಿ, ಕಬ್ಬು ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಹೇಳಿದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವಿಜಯಪುರ, ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನ    ಕರ್ನಾಟಕ  ಮಹಾರಾಷ್ಟ್ರ ರಾಜ್ಯದ ಕನ್ನಡ  ಸಂಘಟನೆಗಳ ಸಹಯೋಗದಲ್ಲಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಸೋಮವಾರ ಹಮ್ಮಿಕೊಂಡ ಕರ್ನಾಟಕ ಸಂಭ್ರಮ-೫೦, ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸಾಕ್ಷ್ಯಚಿತ್ರಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದರು.
ಕನ್ನಡಿಗರು ಸೋಲಾಪುರ, ಸಾಂಗ್ಲಿ ಸೇರಿದಂತೆ ದೇಶದ ಯಾವ ಮೂಲೆಯ ಲ್ಲಾದರೂ ವಾಸಿಸಿದರೂ ಕನ್ನಡಿಗರ ಸಮಸ್ಯೆಗಳಿಗೆ ನಮ್ಮ ಸರ್ಕಾರ ಸದಾ ಸ್ಪಂದಿಸಲಿದೆ. ಕರ್ನಾಟಕ-ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯಗಳು ಒಂದಾಗಿ ಪರಸ್ಪರ ಸಮನ್ವಯತೆಯಿಂದ ನಿರ್ಧಾರ ಕೈಗೊಂಡು ಕೃಷ್ಣಾ ನೀರನ್ನು ಬಳಕೆ ಮಾಡಿಕೊಂಡಲ್ಲಿ ಐತಿಹಾಸಿಕವಾಗಲಿದೆ. ಇಡಿ ದೇಶಕ್ಕೆ ಮಾದರಿಯಾಗಲಿದೆ. ಪ್ರತಿ ವರ್ಷ ೩೦೦ ರಿಂದ ೫೦೦ ಟಿಎಂಸಿ ಸಮುದ್ರ ಪಾಲಾಗುವ ನೀರು ಬಳಕೆಮಾಡಿಕೊಂಡಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ವಾದಂತಾಗುತ್ತದೆ. ಈ ನಿಟ್ಟಿನಲ್ಲಿ ಮೂರು ಸರ್ಕಾರಗಳು ಚಿಂತನೆ ನಡೆಸುವ ಅವಶ್ಯಕತೆ ಇದೆ ಎಂದು ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ್ ಎಸ್.ತಂಗಡಗಿ,  ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ, ಗೀತಾಂಜಲಿ ಪಾಟೀಲ, ಬಾಲ ವಿಕಾಸ ಅಕಾಡೆಮಿಕ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಕರ್ನಾಟಕ  ಗಡಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ದಾನಮ್ಮದೇವಿ ಟ್ರಸ್ಟ್ನ ಅಧ್ಯಕ್ಷ ವಿಜುಗೌಡ ಪಾಟೀಲ,, ಎಂ.ಎಸ್. ಮದಭಾವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ,   ಎಮ್ ಆರ್ ಪಾಟೀಲ, ರಾಜುಗೌಡ ಪೊಲೀಸ್ ಪಾಟೀಲ  ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರು, ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಸ್ವಾಗತಿಸಿದರು.
Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.