ಕೆಯುಡಬ್ಲೂಜೆ ಮತ್ತು ಪ್ರೆಸ್ ಕ್ಲಬ್‌ನಿಂದ ನ.30 ರಂದು ಯಕ್ಷಗಾನ ತಾಳ ಮದ್ದಳೆ

Nov 27, 2024 - 19:22
 0

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮತ್ತು ಪ್ರೆಸ್ ಕ್ಲಬ್‌ನ ಸಂಯುಕ್ತಾಶ್ರಯದಲ್ಲಿ ಬಹುರೂಪಿ ೌಂಡೇಷನ್ ಮತ್ತು ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ನ.30ರಂದು ಸಂಜೆ 5.30 ಗಂಟೆಗೆ ಯಕ್ಷಗಾನ ತಾಳ ಮದ್ದಳೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾಂಸ್ಕೃತಿಕ ಸಂಜೆಯ ಈ ಕಾರ್ಯಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಡಾ.ಪುರುಷೋತ್ತ ಬಿಳಿಮಲೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್ ಅವರು ಅಧ್ಯಕ್ಷತೆ ವಹಿಸುವರು. ಕೆಯುಡಬ್ಲೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಮತ್ತು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೆಳ್ಳಿತಟ್ಟೆ ಹಾಜರಿರುವರು.

ಪ್ರಖ್ಯಾತ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ ಹಾಗೂ ಅವಿನಾಶ್ ಶೆಟ್ಟಿ ತಂಡದಿಂದ ಪಾರ್ತಿ ಸುಬ್ಬರ ಅಂಗದ ಸಂಧಾನ ಯಕ್ಷಗಾನ ತಾಳ ಮದ್ದಳೆ ಕಾರ್ಯಕ್ರಮ ನಡೆಯಲಿದೆ. ಹಿಮ್ಮೇಳದಲ್ಲಿ ದೀಪಕ್ ತುಳುಪುಳೆ, ಅಕ್ಷಯ ರಾವ್ ವಿಟ್ಲ, ಅವಿನಾಶ್ ಬೈಪಾಡಿತ್ತಾಯ ಭಾಗವಹಿಸುವರು.

ರಿಷಿಕಾ ಕುಂದೇಶ್ವರಗೆ ಸನ್ಮಾನ:

ಇದೇ ಸಂದರ್ಭದಲ್ಲಿ ಜೀ ಕನ್ನಡ ಡ್ರಾಮ ಜೂನಿಯರ್ಸ್‌ 5ರ ಪ್ರಶಸ್ತಿ ವಿಜೇತಳಾದ ರಿಷಿಕಾ ಕುಂದೇಶ್ವರ ಅವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.