ಸಾರ್ವಜನಿಕರ ಹಿತ ಕಾಯಲು ಮಹಾನಗರ ಪಾಲಿಕೆ ಬದ್ಧ; ಪಾಲಿಕೆ ಸದಸ್ಯೆ ಆರತಿ ಶಹಾಪೂರ

Sep 30, 2024 - 04:38
 0
ಸಾರ್ವಜನಿಕರ ಹಿತ ಕಾಯಲು ಮಹಾನಗರ ಪಾಲಿಕೆ ಬದ್ಧ; ಪಾಲಿಕೆ ಸದಸ್ಯೆ ಆರತಿ ಶಹಾಪೂರ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ವಿಜಯಪುರ: ನಗರದಲ್ಲಿ ಏಕಾಏಕಿ ಸುರಿದ ಬಾರೀ ಮಳೆಗೆ ಜನಜೀವನ ಬಹಳ ಅಸ್ತವ್ಯಸ್ತಗೊಂಡಿದ್ದು, ಸದ್ಯಕ್ಕೆ ತಾತ್ಕಾಲಿಕ ಪರಿಹಾರ ಕಾರ್ಯಕೈಗೊಳ್ಳಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಎಲ್ಲ ಅಗತ್ಯ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಸದಸ್ಯೆ ಹಾಗೂ ಕಾಂಗ್ರೆಸ್ ಯುವನಾಯಕಿ ಆರತಿ ಶಹಾಪೂರ ಅವರು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ನಗರ ವ್ಯಾಪ್ತಿಯಲ್ಲಿಯೂ ವರುಣ ತನ್ನ ಆರ್ಭಟ ತೋರಿದ್ದು, ಮಳೆರಾಯನ ರುದ್ರ ನರ್ತನಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಈ ಕುಂಭದ್ರೋಣ ಮಳೆಯಿಂದ ಜನ ಜಾನುವಾರುಗಳಿಗೆ ಬಹಳ ತೊಂದರೆ ಉಂಟಾಗಿದೆ. ಅಲ್ಲಲ್ಲಿ ಆಸ್ತಿ, ಪಾಸ್ತಿ ಹಾನಿಯೂ ಸಂಭವಿಸಿದೆ. ಆದರೆ ಜನರು ಯಾವುದೇ ಕಾರಣಕ್ಕೂ ವೃಥಾ ಆತಂಕಕ್ಕೆ ಒಳಗಾಗಬಾರದು. ಜನರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ.

ಇವರಿಗೆ ಜನರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.ಮೊನ್ನೆ ತಡರಾತ್ರಿ ಏಕಾಏಕಿ ಸುರಿದ ಬಾರೀ ಮಳೆಯ ಹಾನಿಯ ಪರಿಹಾರ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿದ ಎಂ.ಬಿ.ಪಾಟೀಲ ಅವರ ನಿರ್ದೇಶನದ ಮೇರೆಗೆ ಈಗಾಗಲೇ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಮರೋಪಾದಿಯಲ್ಲಿ ಕಾರ್ಯೋನು ಖವಾಗಿದ್ದು, ಸದ್ಯಕ್ಕೆ ತಾತ್ಕಾಲಿಕ ಪರಿಹಾರ ಕಾರ್ಯಕೈಗೊಂಡಿದ್ದು, ಮುಂಬರುವ ದಿನಗಳಲ್ಲಿ ಎಲ್ಲ ಅಗತ್ಯ ಶ್ಯಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ ಯಾವುದೇ ವಾರ್ಡಿನ ನಾಗರಿಕರು ವೃಥಾ ಆತಂಕಕ್ಕೆ ಒಳಗಾಗಬಾರದು. ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸದಾ ತದೊಂದಿಗೆ ಇರುತ್ತದೆ. ಎಲ್ಲ ವಾರ್ಡ್‌ಗಳಲ್ಲಿಯೂ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯೋನು ಖವಾಗಿದ್ದು, ಸಾರ್ವಜನಿಕರು ಶಾಂತಿಯಿಂದಿದ್ದು, ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಸಹಕಾರ ನೀಡಲು ವಿನಂತಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.