ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ದೇವು ಆಯ್ಕೆ

ಬೆಂಗಳೂರು: ಹಾಸನ ಜಿಲ್ಲೆಯ ಉದಯೋನ್ಮುಖ ಪ್ರತಿಭೆ, ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ದೇವು ಅವರು ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಬೆಂಗಳೂರಿನ ಕಲಾಭೂಮಿ ಪ್ರತಿಷ್ಠಾನ ಕೊಡುಮಾಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಬೆಂಗಳೂರಿನ ಕಲಾಗ್ರಾಮ ಸಂಸ್ಕೃತಿಕ ಭವನದಲ್ಲಿ ನವಂಬರ್ 29ರಂದು ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಪ್ರತಿಷ್ಠಾನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.