ಭಾರತದ ಸಂವಿಧಾನ ವಿಶ್ವ ಶ್ರೇಷ್ಠ ಸಂವಿಧಾನ : ಶಿವಾಜಿ ಅನಂತ ನಲವಡೆ

Nov 27, 2024 - 21:02
 0
ಭಾರತದ ಸಂವಿಧಾನ ವಿಶ್ವ ಶ್ರೇಷ್ಠ ಸಂವಿಧಾನ : ಶಿವಾಜಿ ಅನಂತ ನಲವಡೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ವಿಜಯಪುರ : ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಹಾಗೂ ಕಾನೂನುಗಳನ್ನ ವಿವರಿಸುವ ಸಂವಿಧಾನವನ್ನು  ತಯಾರಿಸುವಲ್ಲಿ ಬಹುದೊಡ್ಡ ಪಾತ್ರ ವಹಿಸಿದ್ದಾರೆ.  ಭಾರತ ಸಂವಿಧಾನವು ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ್ ನಲವಡೆ ಅವರು ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 26 ರಂದು 
ಜಿಲ್ಲಾ ವಕೀಲರ ಸಮುದಾಯ ಭವನದಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ದೇಶದ ಇತಿಹಾಸದಲ್ಲಿ ಘಟಿಸಿದ ಮಹತ್ವದ ಹಾಗೂ ಅದ್ಭುತ ಕ್ಷಣ ಸಂವಿಧಾನ ಸಮರ್ಪಣ ದಿನ. ಡಾ ಬಿ.ಆರ್ ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ನೇತೃತ್ವದಲ್ಲಿ ಸಂವಿಧಾನ ರಚನೆಯಾಗಿದ್ದು, ಅವಿರತ ಪ್ರಯತ್ನಗಳನ್ನು ಈ ದಿನ ನೆನಪಿಸುತ್ತಿದೆ.

ದೇಶದ ಯುವಕರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಸಂವಿಧಾನ ದಿನಾಚರಣೆ ಯನ್ನು ಆಚರಿಸಲಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ. ಎಸ್. ಹಾಗರಗಿ, ಡಿ.ಜೆ. ಬಿರಾದರ. ಎಸ್. ಎಸ್. ಛಾಯಗೊಳ, ಬಿ.ಎ. ಲಾಹೋರಿ ಸೇರಿದಂತೆ ಸಿವಿಲ್ ನ್ಯಾಯಾಧೀಶರು, ನ್ಯಾಯಾಂಗ ಇಲಾಖೆಯ ವಕೀಲರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.