ಕೃಷಿಕ ಸಮಾಜ ಜಿಲ್ಲಾ ಅಧ್ಯಕ್ಷರಿಂದ ಸಚಿವ ಶಿವಾನಂದ ಪಾಟೀಲಗೆ ಸನ್ಮಾನ

ಬಸವನಬಾಗೇವಾಡಿ: ಇತ್ತೀಚೆಗೆ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷರಾಗಿ ಶಿವನಗೌಡ ಬಿರಾದಾರ ಆಯ್ಕೆಯಾದ ಹಿನ್ನಲೆಯಲ್ಲಿ ಶುಕ್ರವಾರ ವಿಜಯಪುರ ನಗರದಲ್ಲಿ ಜವಳಿ ಹಾಗೂ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ.ಎಸ್ ಪಾಟೀಲ ಅವರನ್ನು ಬೇಟಿ ಮಾಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಕೋ ಅಪ್ರೇಟಿವ್ಹ ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ, ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಬಸವರಾಜ ಸೋಂಪುರ(ಮನಗೂಳಿ), ಶಂಕರಗೌಡ ಪಾಟೀಲ, ಬಸನಗೌಡ ಚಿಕ್ಕೊಂಡ, ಸಂಗನಗೌಡ ಚಿಕ್ಕೊಂಡ, ಶೇಖರಗೌಡ ಬಿರಾದಾರ, ಬಸನಗೌಡ ಪಾಟೀಲ ಉಪಸ್ಥಿತರಿದ್ದರು.