ಕ್ರೀಡಾಕೂಟಗಳಿಂದ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಸಹಕಾರ : ಶಾಸಕ ಅಲ್ಲಮಪ್ರಭು ಪಾಟೀಲ್
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ಕಲಬುರಗಿ : ಕ್ರೀಡಾಕೂಟಗಳು ಪ್ರತಿಭೆಯನ್ನು ಪ್ರದರ್ಶಿಸಲು ಈ ಕ್ರೀಡಾಕೂಟಗಳು ಸಹಕಾರವಾಗುತ್ತವೆ ಕಲ್ಯಾಣ ಕರ್ನಾಟಕ ಭಾಗದ ೭ ಜೆಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲ್ಲಿದ್ದಾರೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಹೇಳಿದರು.
ರವಿವಾರದಂದು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರಗಳು ಸಂಯುಕ್ತಶ್ರಾಯದಲ್ಲಿ ೨೦೨೪-೨೫ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಟವನ್ನು ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕಲಬುರಗಿ ಜಿಲ್ಲೆಯ ಕ್ರೀಡಾಪಟುಗಳು ಮುಂದೆ ನಡೆಯುವ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಗೆದ್ದು ನಮ್ಮ ಜಿಲ್ಲೆಗೆ ಹೆಮ್ಮೆ ತರುವಂತಹ ಆಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.
ದಸರಾ ಕ್ರೀಡಾಕೂಟವು ೧೬೧೦ರಲ್ಲಿ ಪ್ರಾರಂಭಗೊಂಡಿರುವ ದಸರಾವು ಇವತ್ತಿಗೂ ಆಚರಿಸುತ್ತಿದ್ದೇವೆ. ೨೦೨೩-೨೪ನೇ ಸಾಲಿನ ಮಹಿಳಾ ಕ್ರೀಡಾ ಸಂಕಿರ್ಣ ಮತ್ತು ಜಿಲ್ಲಾ ಕ್ರೀಡಾ ಸಂಕಿರ್ಣ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ೧೪ ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಕಾರ್ಯ ಪ್ರಗತಿಯಲ್ಲಿ ಇದೆ. ಎಂದರು. ಈ ಭಾಗದಲ್ಲಿ ಕ್ರೀಡಾ ಮನೋಭಾವನೆಯನ್ನು ಬೆಳೆಯಲು ಮುಂದಿನ ದಿನಮಾನಗಳಲ್ಲಿ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣ ಮಾಡಲು ನಿರ್ಧಾರಿಸುತ್ತೇವೆ ಎಂದು ಹೇಳಿದರು.
ವಿಧಾನ ಪರಿಷತ್ತಿನ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಬಲೂನ ಹರಿಬಿಡುವುದರ ಮೂಲಕ ಚಾಲನೆ ನೀಡಿದರು.
ವಿಧಾನ ಪರಿಷತ ಸದಸ್ಯ ಶಶೀಲ್ ಜಿ.ನಮೋಶಿ ಅವರು ಮಾತನಾಡಿ,ನಾವು ಶಿಕ್ಷಣಕ್ಕೆ ಎಷ್ಟು ಮಹತ್ವ ಕೊಡುತ್ತೆವೋ ಅಷ್ಟೇ ಮಹತ್ವವನ್ನು ಕ್ರೀಡಾಗಳಿಗೆ ಮಹತ್ವವನ್ನು ಕೊಡಬೇಕು. ಈ ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ೩-೪ ಕೋಟಿ ರೂಪಾಯಿ ಅನುದಾನವನ್ನು ಕ್ರೀಡಾಂಗಣದ ಅಭಿವೃದ್ಧಿಗೆ ನೀಡಬೇಕು ಇದರಿಂದ ಈ ಭಾಗದ ಹೆಚ್ಚಿನ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಲು ಸಹಕಾರವಾಗುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಪ್ರತಿವರ್ಷ ೩-೪ ಕೋಟಿ ರೂಪಾಯಿಗಳನ್ನು ಕ್ರೀಡೆಗಳಿಗೆ ಖರ್ಚು ಮಾಡಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ ಕೆ. ಅವರು ಮಾತನಾಡಿ, ಈ ಕ್ರೀಡಾಕೂಟದಲ್ಲಿ ೭ ಜೆಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಲಿದ್ದಾರೆ. ಇಲ್ಲಿ ಗೆದ್ದಂತಹ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಆಯ್ಕೆಯಾಗುತ್ತಾರೆ ರಾಜ್ಯ ಮಟ್ಟದಲ್ಲಿ ಗೆದ್ದಂತವರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ.ಇಂದು ವಾಲಿಬಾಲ್,ಹ್ಯಾಂಡ್‌ಬಾಲ್,ಟೇಬಲ್‌ಟೆನ್ನಿಸ್,ಈಜು,ಲಾನ್ ಟೆನ್ನಿಸ್ ಜೂಡೋ ಕ್ರೀಡೆಗಳು ನಡಿಯುತ್ತೇವೆ ಎಂದು ಹೇಳಿದರು.
ರಾಜ್ಯಮಟ್ಟದ ಈಜು ಕ್ರೀಡಾಪಟು, ಬಸವರಾಜ ಜೆ. ಪಾಟೀಲ,ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾ ಪಟು ಹ್ಯಾಪಿರಾಜ ಎಸ್. ಜೋಡು, ಕ್ರೀಡಾಜ್ಯೋತಿಯನ್ನು ವಿಧಾನ ಪರಿಷತ್ತ ಸದಸ್ಯರಾದ ಶಶೀಲ್ ಜಿ.ನಮೋಶಿಯವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಕ್ರೀಡಾ ಪ್ರತಿಜ್ಞಾವಿಧಿಯನ್ನು ಬಸವರಾಜ ಜೆ ಪಾಟೀಲ್ ಭೋದಿಸಿದರು.
ಕ್ರೀಡಾಕೂಟದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಕ ಅಧಿಕಾರಿ ಭಂವರ ಸಿಂಗ್ ಮೀನಾ, ಜಿಲ್ಲಾಧಿಕಾರಿಗಳ ಕಚೇರಿಯ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿಸೇರಿದಂತೆ ಹಾಕಿ ತರಬೇತಿದಾರರು ಸಂಜಯಬಾಣದ,ಬಾಸ್ಕೇಟ್ ಬಾಲ್ ತರಬೇತಿದಾರರು ಪ್ರವೀಣ ಪುಣೆ,ಮುಜಮ್ಮಿಲ್ ಕೆಂಭಾವಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.