ಸಂಚಾರಿ ನಿಯಮ ಪಾಲಿಸಲು ಪೊಲೀಸ್ ಅಧಿಕಾರಿಗಳಿಂದ ಸೂಚನೆ

Oct 4, 2024 - 12:39
 0
ಸಂಚಾರಿ ನಿಯಮ ಪಾಲಿಸಲು ಪೊಲೀಸ್ ಅಧಿಕಾರಿಗಳಿಂದ ಸೂಚನೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ತಾಳಿಕೋಟೆ :  ಕಳೆದ ಎರಡು  ತಿಂಗಳಿನಿAದ ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತಗಳು ಉಂಟಾಗಿ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಮೃತಪಟ್ಟಿರುವುದು ಹಾಗೂ ಗಂಭೀರ ಸ್ವರೂಪದ ಗಾಯಗಳಾಗಿರುವುದು ವಿಷಾದಕರ ಸಂಗತಿ ಕಾರಣ ನಿಮ್ಮ ಹಾಗೂ ಕುಟುಂಬದ ಸುರಕ್ಷತೆಗೆ ಜಾಗೃತೆ ವಹಿಸಲು ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ರಾಮನಗೌಡ ಸಂಕನಾಳ, ಅಪರಾಧ ವಿಭಾಗ ಪಿಎಸ್‌ಐ ಆರ್.ಎಸ್.ಭಂಗಿ ಅವರು ತಿಳಿಸಿದ್ದಾರೆ.

      ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು, ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೇಲ್ಮೇಟ್ ಧರಿಸುವುದು, ಸಾಧ್ಯವಾದಷ್ಟೂ ತಡರಾತ್ರಿ ಪ್ರಯಾಣ ಮಾಡಬಾರದು, ವಾಹನ ಚಾಲನಾ ಪರವಾನಿಗೆ ಹಾಗೂ ವಿಮೆ ಇಲ್ಲದೇ ವಾಹನ ಚಲಾಹಿಸಬಾರದು, ಚಿಕ್ಕ ಮಕ್ಕಳಿಗೆ ವಾಹನ ಚಾಲನೆ ಮಾಡಲು ಕೊಡಬಾರದು, ಸೀಟ್ ಬೆಲ್ಟ್ ಧರಿಸಿ ವಾಹನ ಚಾಲನೆ ಮಾಡುವುದು, ವಾಹನ ಚಾಲನೆ ಮಾಡುವಾಗ ರಸ್ತೆಯಲ್ಲಿ ಎಡಭಾಗದಲ್ಲಿ ಅಳವಡಿಸಿರುವ ರಸ್ತೆ ತಿರುವು, ರೋಡ ಹಂಪ್ಸ್, ಸ್ಪೀಡ್ ಲಿಮಿಟಿ ಇತ್ಯಾದಿ ಸೂಚನಾ ಫಲಕಗಳನ್ನು ನೋಡಿಕೊಂಡು ಅದರಂತೆ ನಿಯಮ ಪಾಲನೆ ಮಾಡುವುದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಯಾವುದೇ ಕಾರಣಕ್ಕೂ ರಸ್ತೆಯ ಮೇಲೆ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಮಾಡುವಾಗ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಇಂತಹ ರಸ್ತೆಯಲ್ಲಿ ಇಂತಹ ಚಟುವಟಿಕೆಗಳನ್ನು ಮಾಡಬಾರದು, ಹೆದ್ದಾರಿಗಳಲ್ಲಿ ಸಂಚರಿಸುವಾಗ ವಾಹನಗಳನ್ನು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡದೇ ನಿಗದಿತ ಸ್ಥಳಗಲ್ಲಿ ನಿಲ್ಲಿಸಬೇಕು, ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸುವಾಗ ನಿಧಾನವಾಗಿ ವಾಹನ ಚಾಲನೆ ಮಾಡುವುದು ಹಾಗೂ ನಿಗದಿ ಪಡಿಸಿದ ಸ್ಥಳಗಳಲ್ಲಿ ವಾಹನಗಳ ಪಾರ್ಕಿಂಗ್ ಮಾಡುವುದು, ಈ ರೀತಿ ಮೇಲ್ಕಂಡ ಸಂಚಾರಿ ನಿಯಗಳನ್ನು ಪಾಲನೆ ಮಾಡಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸಹಕರಿಸಬೇಕೆಂದು ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ರಾಮನಗೌಡ ಸಂಕನಾಳ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಸ್.ಭಂಗಿ ಅವರು ಪ್ರಕಟನೆ ಮೂಲಕ ಕೋರಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.