ಕಾರ್ಮಿಕರ ಮೇಲೆ ಹಲ್ಯೆ ಮಾಡಿದ ಆರೋಪಿತರ ಬಂಧನ

Jan 20, 2025 - 19:27
 0
ಕಾರ್ಮಿಕರ ಮೇಲೆ ಹಲ್ಯೆ ಮಾಡಿದ ಆರೋಪಿತರ ಬಂಧನ

ವಿಜಯಪುರ: ಗಾಂಧಿ ನಗರದ ಸ್ಟಾರ್ ಚೌಕ್ ಹತ್ತಿರವಿರುವ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಕಳೆದ ಮೂರು ದಿನಗಳಿಂದ ಕೂಡಿ ಹಾಕಿ ಹಲ್ಲೆ ಮಾಡಿದ ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂವರು ತಪ್ಪಿಸಿಕೊಂಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಸೇರಿ ಇಬ್ಬರ ಬಂಧನವಾಗಿದೆ. ಇನ್ನೂದವರ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ.

       ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಸದಾಶಿವ ಬಸಪ್ಪ ಮಾದರ, ಉಮೇಶ ಬಾಳಪ್ಪ ಮಾದರ ಹಾಗೂ ಸದಾಶಿವ ಚಂದ್ರಪ್ಪ ಬಬಲಾದಿ ಎಂಬುವರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ, ಆತನ ಮಗ ಸೇರಿದಂತೆ ಹಲವರು ದಾರುಣವಾಗಿ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಇವರು ಊರಿಗೆ ಹೋಗಿದ್ದರು. ಮುಂಗಡ ಹಣ ಪಡೆದು ತಡವಾಗಿ ಬಂದಿದ್ದಾರೆ ಎಂಬ ಕಾರಣಕ್ಕೆ ಈ ರೀತಿಯ ಹಲ್ಲೆ ಮಾಡಿದ್ದಾರೆ. ಇನ್ನೂಳಿದ ಆರೋಪಿಗಳನ್ನು ಬಂಧಿಸಲು ತಂಡ ರಚನೆ ಮಾಡಲಾಗಿದೆ. ಹಲ್ಯೆಗೊಳಗಾದ ಕಾರ್ಮಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.