ಯುವಜನೋತ್ಸವ: ವಿಜೇತ ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿ ಎಲ್ ಡಿ ಈ ಸಂಸ್ಥೆ, ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್, ಎನ್ ಎಸ್ ಎಸ್ ಘಟಕ ಇವರ ಸಹಯೋಗದಲ್ಲಿ ಬಿ ಎಲ್ ಡಿ ಈ ನ್ಯೂ ಕ್ಯಾಂಪಸ್ ನ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿಜೇತ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ಪಾರಿತೋಷಕ ವಿತರಿಸಲಾಯಿತು.
ಜನಪದ ನೃತ್ಯ, ಜನಪದ ಗೀತೆ, ಸಾಯಿನ್ಸ ಮೇಳ, ಕವಿತೆ,ಕಥೆ ಬರೆಯುವುದು, ಚಿತ್ರಕಲೆ, ಘೋಷಣೆ, ಗುಡಿ ಕೈಗಾರಿಕೆ, ನೇಕಾರಿಕೆ, ಕೃಷ್ಟಿ ಉತ್ಪನ್ನಗಳ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಧೈವಾಡಿ, ಎಸ್.ಜಿ.ಲೋಣಿ, ನೆಹರು ಯುವ ಕೇಂದ್ರದ ಅಧಿಕಾರಿ ರಾಹುಲ ಡೊಂಗ್ರೆ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಜಾವೀದ್ ಜಮಾದಾರ, ರಾಠೋಡ ಪ್ರಮಾಣ ಪತ್ರ ಹಾಗೂ ಪಾರಿತೋಷಕಗಳನ್ನು ವಿತರಿಸಿದರು.