ಮೋಟಾರ್ ಬೈಕಗಳ ನಡುವೆ ಅಪಘಾತ: ಬೈಕ್ ಸವಾರ ಸಾವು

Feb 4, 2025 - 22:08
 0
ಮೋಟಾರ್ ಬೈಕಗಳ ನಡುವೆ ಅಪಘಾತ: ಬೈಕ್ ಸವಾರ ಸಾವು

ದೇವರಹಿಪ್ಪರಗಿ: ಮೋಟಾರ್ ಬೈಕ್ ಗಳ ನಡುವೆ ಅಪಘಾತ ಬೈಕ್ ಸವಾರ ಮೃತಪಟ್ಟ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಅಂಬೇಡ್ಕರ್ ವೃತ್ತದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸೋಮವಾರದಂದು ನಡೆದಿದೆ. 

ವಿಜಯಪುರ ತಾಲೂಕಿನ ಜಂಬಗಿ ಗ್ರಾಮದ ಚಂದ್ರಮ ಬಸಪ್ಪ ಅಲದಿ(54) ಮೃತ ದುರ್ದೈವಿ. ಸಿಂದಗಿ ಮಾರ್ಗವಾಗಿ ವಿಜಯಪುರ ಪಟ್ಟಣಕ್ಕೆ ಹೋಗುವ ಮಧ್ಯೆ ತಾಂಡದಿಂದ ಇನ್ನೊಂದು ಬೈಕು ದೇವರಹಿಪ್ಪರಗಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಿಕ್ಕಿ ಹೊಡೆದ ನಡೆದ ಘಟನೆ ನಡೆದಿದೆ. 

ಸ್ಥಳೀಯರ ಸಹಾಯದಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಹೋಗುವ ಮಾರ್ಗದ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಪಟ್ಟಣದ ನಿವಾಸಿ ಅತಿ ಜೋರಾಗಿ ಹಾಗೂ ನಿರ್ಲಕ್ಷತನದಿಂದ ತನ್ನ ಗಂಡನ ಬೈಕ್ ಮೇಲೆ ಡಿಕ್ಕಿ ಹೊಡೆದಿದ್ದಾನೆ ಎಂದು ಮೃತರ ಪತ್ನಿ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
ಇದು ದೇವರಹಿಪ್ಪರಗಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ.
---------------------------------------------------
ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಕಳೆದ ಎರಡು ದಿನಗಳಲ್ಲಿ ನಾಲ್ಕು ಅಪಘಾತಗಳು ಆಗಿದ್ದರಿಂದ ಜನ ಭಯಭೀತರಾಗಿದ್ದಾರೆ. ಈ ಕುರಿತು ಸಂಬಂಧಪಟ್ಟ ಇಲಾಖೆ ಗಮನಹರಿಸಿ ಟ್ರಾಫಿಕ್ ಜಾಮ್ ನಿಯಂತ್ರಣ ಮಾಡಬೇಕು. ಇಲ್ಲವೇ ಬೈ ಪಾಸ್ ರಸ್ತೆ ನಿರ್ಮಾಣ ಮಾಡಬೇಕು ಈ ಕುರಿತು ಜಿಲ್ಲಾಧಿಕಾರಿಗಳು ಗಮನಹರಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರ,ಸಾರ್ವಜನಿಕರು ಹಾಗೂ ವಾಹನ ಸವಾರರ ಆಗ್ರಹವಾಗಿದೆ.

-ಶಂಕರಗೌಡ ಹಿರೇಗೌಡ. ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ವಿಜಯಪುರ. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.