ಎಚ್‌ಡಿಕೆಗೆ ಅಪಮಾನ : ಜೆಡಿಎಸ್ ಕಾರ್ಯಕರ್ತರಿಂದ ಮನವಿ

Oct 2, 2024 - 22:03
 0
ಎಚ್‌ಡಿಕೆಗೆ ಅಪಮಾನ : ಜೆಡಿಎಸ್ ಕಾರ್ಯಕರ್ತರಿಂದ ಮನವಿ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 
ಸಿಂದಗಿ; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಪತ್ರದ ಮೂಲಕ ಹಂದಿಗೆ ಹೋಲಿಸಿರುವ ಲೋಕಾಯುಕ್ತ ವಿಶೇಷÀ ತನಿಖಾ ತಂಡ (ಎಸ್‌ಐಟಿ)ದ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ರಾಜ್ಯಪಾಲರಿಗೆ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರ ಮೂಲಕ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬಿರಾದಾರ, ತಾಲೂಕು ಅಧ್ಯಕ್ಷ ಎಂ.ಎನ್.ಪಾಟೀಲ, ಆಲಮೇಲ ಘಟಕದ ಅಧ್ಯಕ್ಷ ಉಸ್ತಾದ ಬಳಗಾನೂರ ಮಾತನಾಡಿ, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹ೦ದಿಗೆ ಹೋಲಿಸಿ, ಚಂದ್ರಶೇಖರ್ ಈ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ. ಇತ ಕರ್ನಾಟಕ ಬಿಜೆಪಿ ಕೂಡ ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕಳಂಕಿತ ಅಧಿಕಾರಿ ಎಂದು ಬಿಜೆಪಿ ಆರೋಪಿಸಿದೆ. ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ನಡೆಯುವ ನಂಬಿಕೆ ಇಲ್ಲ. ಸಿಬಿಐ ತನಿಖೆಯೇ ಆಗಬೇಕೆಂದು ಒತ್ತಾಯಿಸಲು ಬಿಜೆಪಿ ಮುಂದಾಗಿದೆ ಕೇಂದ್ರ ಸಚಿವರ ವಿರುದ್ಧವೇ ಲೋಕಾಯುಕ್ತ ಎಡಿಜಿಪಿ ಮಾತನಾಡುತ್ತಾರೆ ಅಂದರೆ ಮುಡಾ ಕೇಸ್ ತನಿಖೆಯಲ್ಲಿ ಪಾರದರ್ಶಕತೆ ನಿರೀಕ್ಷೆ ಇಲ್ಲ ಎಂದು ಸಿಬಿಐ ತನಿಖೆಗೆ ಆಗ್ರಹಿಸಲು ಬಿಜೆಪಿ ಮುಂದಾಗಿದೆ. ಏತನ್ಮಧ್ಯೆ, ಡಿಸಿಎಂ ಡಿಕೆ ಶಿವಕುಮಾರ್ ನಮಗೂ ಇದಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಇತರ ಕಾಂಗ್ರೆಸ್ ನಾಯಕರು ಎಡಿಜಿಪಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದರು.
ಈ ಹಿನ್ನೆಲೆಯಲ್ಲಿ ನಮ್ಮ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಎಂ. ಚಂದ್ರಶೇಖರ್ ಎಸ್.ಐ.ಟಿ ಸದಸ್ಯರಿಗೆ ಬರೆದಿರುವ ಪತ್ರದಲ್ಲಿ ಹೆÀಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಆಗ್ಗದ ಮತ್ತು ಅವಾಚ್ಯ, ಶಬ್ದಗಳಾದ ಹಂದಿಗಳ ಜೊತೆ ಕೊಳಕಾಗುತ್ತೀರಿ. ಹಂದಿಗಳಂತೆ ಬಳಸಿದ್ದಾರೆ. ಅದರಿಂದ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ ರವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಪ್ರಕಾಶ ಹಿರೇಕುರಬರ, ಉಸ್ತಾದ ಬಳಗಾನೂರ, ಭೀಮು ರತ್ನಾಕರ, ನಾನಗೌಡ ಡವಳಾರ, ರವಿ ಭೋವಿ ಸೇರಿದಂತೆ ಅನೇಕರಿದ್ದರು.   

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.