ಅಕ್ಟೋಬರ್ ೧ ರಂದು ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಜಾಥಾಕ್ಕೆ ಚಾಲನೆ

Oct 1, 2024 - 21:45
 0

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 


ಕಲಬುರಗಿ : ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ. ಘಟಕ, ಜಿಲ್ಲಾ ಸಮೀಕ್ಷಣಾ ಘಟಕ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಅಕ್ಟೋಬರ್ ೧ ರಂದು ಮಂಗಳವಾರ ಬೆಳಿಗ್ಗೆ ೮.೩೦ ಗಂಟೆಗೆ ಕಲಬುರಗಿ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾದ ಜಾಥಾಕ್ಕೆ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಚಾಲನೆ ನೀಡುವರು. 
  ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹನಿರ್ದೇಶಕ ಡಾ. ಎ.ಎಸ್. ರುದ್ರವಾಡಿ, ಗುಲಬರ್ಗಾ ವೈದ್ಯಕೀಯ ಹಾಗೂ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್‌ರಾದ ಡಾ. ಉಮೇಶ ಎಸ್.ಆರ್., ಕಲಬುರಗಿ ವಿಭಾಗದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕ ಡಾ. ಶರಣಬಸಪ್ಪ ಗಣಜಲಖೇಡ, ಕಲಬುರಗಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕರು ಹಾಗೂ ಜಿಲ್ಲಾ ಶಸ್ತçಜ್ಞರಾದ ಡಾ. ಓಂಪ್ರಕಾಶ ಅಂಬುರೆ, ಗುಲಬರ್ಗಾ ವೈದ್ಯಕೀಯ ಹಾಗೂ ವಿಜ್ಞಾನ ಸಂಸ್ಥೆಯ ವ್ಶೆದ್ಯಕಿಯ ಅಧೀಕ್ಷಕ ಡಾ. ಶಿವಕುಮರ ಸಿ.ಆರ್. ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅದಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ  ಹಾಗೂ ಕಲಬುರಗಿ ಎನ್.ಸಿ.ಡಿ. ಜಿಲ್ಲಾ ಸಮೀಕ್ಷಣಾಧಿಕಾರಿಗಳು ಮತ್ತು ಕಾರ್ಯಕ್ರಮಾಧಿಕಾರಿಗಳಾದ ಡಾ. ರಾಜೇಶ ಕಾಂಬಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.