ಅಕ್ಟೋಬರ್ ೧ ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರಗಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಅಕ್ಟೋಬರ್ ೧ ರಂದು ಮಂಗಳವಾರ ಬೆಳಿಗ್ಗೆ ೧೦.೩೦ ಗಂಟೆಗೆ ಕಲಬುರಗಿ ಹೊಸ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಶಾಸಕರು, ಇತರೆ ಗಣ್ಯರು ಮುಖ್ಯ ಅತಿಥಿಗಳಾಗಿ ಹಾಗೂ ಅಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.