ಬಡವ್ರ ಮಕ್ಳು ಬೆಳೀಬೇಕು ಕಣ್ರಯ್ಯ ಡಬ್ಬಿಂಗ್ ಮುಕ್ತಾಯ

Oct 4, 2024 - 08:34
 0
ಬಡವ್ರ ಮಕ್ಳು ಬೆಳೀಬೇಕು ಕಣ್ರಯ್ಯ ಡಬ್ಬಿಂಗ್ ಮುಕ್ತಾಯ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಬೆಂಗಳೂರು : ಮಂಜು ಕವಿ ನಿರ್ದೇಶನದ, ಸಿ.ಎಸ್ ವೆಂಕಟೇಶ್  ನಿರ್ಮಾಣದ ಚೊಚ್ಚಲ ಚಿತ್ರ ಬಡವ್ರ ಮಕ್ಳು ಬೆಳೀಬೇಕು ಕಣ್ರಯ್ಯ ಚಿತ್ರದ ಡಬ್ಬಿಂಗ್ ಕಾರ್ಯ ಇತ್ತಿಚೆಗೆ ಪೂರ್ಮಗೊಂಡಿದೆ.

ಆಕಾಶ ಸ್ಟುಡಿಯೋದಲ್ಲಿ ಚಿತ್ರದ ಡಬ್ಬಿಂಗ್ ಮುಗಿದಿದ್ದು, ಡಿಸೆಂಬರ್ ಅಥವಾ ಜನವರಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.


ಪತ್ರಿಕೆ ಜೊತೆ ಮಾತನಾಡಿದ ನಿರ್ಮಾಪಕ ಸಿ.ಎಸ್ ವೆಂಕಟೇಶ್, ‘ನಾನು ಕೋಲಾರ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೆ. ಚಿತ್ರರಂಗದ ಸಾಕಷ್ಟು ಗಣ್ಯರು ನನಗೆ ಪರಿಚಯ. ಎಷ್ಟೋ ಸ್ನೇಹಿತರು ಚಿತ್ರ ನಿರ್ಮಾಣ ಮಾಡುವಂತೆ ಹೇಳುತ್ತಿದ್ದರು. ಈಗ ಕಾಲ ಕೂಡಿ ಬಂದಿದೆ. ಡಾಲಿ ಅವರು ಹೇಳಿದ ಮಾತೇ ಈ ಚಿತ್ರ ನಿರ್ಮಾಣಕ್ಕೆ ಸ್ಪೂರ್ತಿ. ಮಂಜುಕವಿ ಅವರು ಮಾಡಿಕೊಂಡಿರುವ ಕಥೆ ತುಂಬಾ ಚೆನ್ನಾಗಿದೆ. ನಾನು ಕೂಡ ಬಡತನದಿಂದಲೇ ಬಂದಿರುವವನು. ಹಾಗಾಗಿ ಈ ಕಥೆ ತುಂಬಾ ಇಷ್ಟವಾಯಿತು’ ಎಂದರು.

ನಿರ್ದೇಶಕ ಮಂಜುಕವಿ ಮಾತನಾಡಿ, ಡಾಲಿ ಅವರು ಹೇಳಿದ ಮಾತನ್ನು ಸ್ಫೂರ್ತಿಯಾಗಿಟ್ಟುಕೊಂಡು ಈ ಚಿತ್ರದ ಕಥೆ ಬರೆದಿದ್ದೇನೆ. ಬಡ ಕುಟುಂಬದಲ್ಲಿ ಹುಟ್ಟಿದ ಮಕ್ಕಳಿಗೆ ಎಷ್ಟೇ ಕಲೆ ಇದ್ದರೂ, ಚೆನ್ನಾಗಿ ಓದುವ ಹಂಬಲವಿದ್ದರೂ ಅವರನ್ನು ಬೆಳೆಸಲು ಯಾರು ಮುಂದೆ ಬರುವುದಿಲ್ಲ. ಅವರಲ್ಲಿರುವ ಪ್ರತಿಭೆ ಹಾಗೆ ನಶಿಸಿ ಹೋಗುತ್ತದೆ. ಹಾಗಾಗಬಾರದು ಪ್ರತಿಭೆಯುಳ್ಳ ಬಡಮಕ್ಕಳ ಕೀರ್ತಿ ಬೆಳಗಬೇಕು ಎಂಬ ಆಶಯ ಚಿತ್ರದ್ದು. ಬೆಂಗಳೂರು ಹಾಗೂ ಮೈಸೂರಿನಲ್ಲಿ  ಚಿತ್ರೀಕರಣ ನಡೆದಿದೆ ಎಂದರು.

ಸುಚೇಂದ್ರ ಪ್ರಸಾದ್ ಹಾಗೂ ಸಂಗೀತ ಅವರು ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಇವರ ಮಕ್ಕಳ ಪಾತ್ರದಲ್ಲಿ ರಾಜವರ್ಧನ್, ಲಾವಣ್ಯ, ವೈಭವಿ ಅಭಿನಯಿಸುತ್ತಿದ್ದಾರೆ. ಫ್ರೆಂಡ್ಸ್ ವಾಸು, ಮೂಗೂರು ಸುರೇಶ್, ಚಂದ್ರಪ್ರಭ, ಚೈತ್ರಾ ಕೊಟ್ಟೂರು, ಮಂಜು ಪಾವಗಡ, ಚಿದಾನಂದ್, ಜಗದೀಶ್ ಕೊಪ್ಪ, ವಿಶ್ವಪ್ರಕಾಶ ಮಲಗೊಂಡ, ಶಿವಾರೆಡ್ಡಿ, ಸನತ್, ವಿನೋದ್ ತಾರಾಬಳಗದಲ್ಲಿದ್ದಾರೆ. ವಿನು ಮನಸು ಹಿನ್ನೆಲೆ ಸಂಗೀತವಿದೆ. ರೇಣುಕುಮಾರ್ ಛಾಯಾಗ್ರಹಣವಿದೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ ವಿಜಯಪುರದ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.