ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್‍ಶಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Jan 7, 2025 - 23:24
 0

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.

ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ   karnatakamediaacademy@gmail.com  ಗೆ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ ವಿಜಯಪುರದ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.