ಜನವರಿ 06 ರಿಂದ 20 ರವರೆಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಕರ್ನಾಟಕ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ “ಯುವನಿಧಿ ಯೋಜನೆ”ಯು ರಾಜ್ಯದ 2023-24 ಹಾಗೂ 2024-25 ನೇ ಸಾಲಿನಲ್ಲಿ ಪದವಿ / ಸ್ನಾತಕೋತ್ತರ ಪದವಿ / ಡಿಪೆÇ್ಲೀಮಾ ತೇರ್ಗಡೆಯಾದ ಅರ್ಹ ನಿರುದ್ಯೋಗಿ ಯುವಕ / ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು (ಪದವಿ ಉತ್ತೀರ್ಣರಾದವರಿಗೆ ರೂ. 3000/- ಪ್ರತಿ ಮಾಹೆ ಹಾಗೂ ಡಿಪೆÇ್ಲೀಮಾ ಉತ್ತೀರ್ಣರಾದವರಿಗೆ ರೂ. 1500/- ಪ್ರತಿ ಮಾಹೆಯಂತೆ, ಗರಿಷ್ಠ 2 ವರ್ಷಗಳ ಅವಧಿಗೆ ಅಥವಾ ಉದ್ಯೋಗ ಸಿಗುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಅದು) ಸಬಲೀಕರಣಗೊಳಿಸಲು ಜಾರಿಗೊಳಿಸಿರುವ ಸರ್ಕಾರದ ಮಹತ್ತರ ಯೋಜನೆ ಇದಾಗಿದೆ.
ನೋಂದಣಿಗಾಗಿ ಅರ್ಹತೆ :
2023-24 ಮತ್ತು 2024-25 ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪೆÇ್ಲೀಮಾ ತೇರ್ಗಡೆ ಹೊಂದಿದವರು. ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇಲ್ಲದೇ ಇರುವವರು. ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು. ಕನಿಷ್ಠ 6 ವರ್ಷ ಕರ್ನಾಟಕದ ರಹವಾಸಿ ಆಗಿರಬೇಕು. ನೋಂದಣಿಗಾಗಿ ಸೇವಾಸಿಂಧು ಪೆÇೀರ್ಟಲ್ www.sevasindhugs.
ಪದವಿ / ಸ್ನಾತಕೋತ್ತರ ಪದವಿ / ಡಿಪೆÇ್ಲೀಮಾ ಪ್ರಮಾಣ ಪತ್ರಗಳನ್ನು ನ್ಯಾಡ್ ಪೆÇೀರ್ಟಲ್ https://nad.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡುವುದು ಅಥವಾ ಸಹಾಯವಾಣಿ ಸಂಖ್ಯೆ 1800 5997154 ಸಂಪರ್ಕಿಸಬಹುದು ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.