ಸಂಸದೀಯ ವ್ಯವಹಾರಗಳು ಮತ್ತು ಶಾಸನಾ ರಚನೆ ಇಲಾಖೆಯ ಸಾಧನೆಗಳು
ಭಾರತ ರಾಜ್ಯಪತ್ರದಲ್ಲಿ ಪ್ರಕಟವಾದ 26 ಕೇಂದ್ರ ಅಧಿನಿಯಮಗಳು ಮತ್ತು 36 ಕೇಂದ್ರ ನಿಯಮಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಮರುಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಜಾರಿಯಲ್ಲಿರುವ ಎಲ್ಲಾ ಕಾನೂನುಗಳು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಅನುವಾಗಲು 1957 ರಿಂದ ಇತ್ತೀಚಿನವರೆಗೆ ಆಗಿರುವ ಎಲ್ಲಾ ತಿದ್ದುಪಡಿಗಳನ್ನು ಇಂದೀಕರಿಸಿ, ಇಲಾಖೆಯ ವೆಬ್‍ಸೈಟ್ www.dpal.karnataka.
2024ನೇ ಸಾಲಿನ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಯನ್ನು ಶಾಲಾಶಿಕ್ಷಣ ಮತ್ತು ಸಾಕ್ಷರತೆ (ಪ್ರೌಢಶಾಲೆ ಮತ್ತು ಪದವಿ ಪೂರ್ವ) ಇಲಾಖೆಯ ಸಹಯೋಗದೊಂದಿಗೆ 2024ನೇ ನವೆಂಬರ್ 14 ರಂದು ಶಿವಮೊಗ್ಗದಲ್ಲಿ ನಡೆಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.