ಅಂತರಾಷ್ಟ್ರೀಯ ಪುಸ್ತಕ ಮೇಳ 3ನೇ ಆವೃತ್ತಿಯಲ್ಲಿ ಭಾಗವಹಿಸಿದ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್

Jan 7, 2025 - 23:39
 0
ಅಂತರಾಷ್ಟ್ರೀಯ ಪುಸ್ತಕ ಮೇಳ 3ನೇ ಆವೃತ್ತಿಯಲ್ಲಿ ಭಾಗವಹಿಸಿದ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಬೆಂಗಳೂರು : ಕೇರಳದ ರಾಜ್ಯದ ತಿರುವನಂತಪುರದಲ್ಲಿರುವ ವಿಧಾನಸಭೆ ಸಚಿವಾಲಯದಲ್ಲಿ ಹಮ್ಮಿಕೊಳ್ಳಲಾದ ಅಂತರಾಷ್ಟ್ರೀಯ ಪುಸ್ತಕ ಮೇಳ- 3ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಭಾಗವಹಿಸಿದರು.

ಕೇರಳ ವಿಧಾನಸಭೆಯ ಸಭಾಧ್ಯಕ್ಷರಾದ ಎ.ಎನ್. ಶಮೀರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪುಸ್ತಕ ಮೇಳವನ್ನು ಉದ್ಘಾಟಿಸಿದರು.

ಈ ಸಮಾರಂಭದಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಕೇರಳ ರಾಜ್ಯದ ಸಚಿವ ಸಂಪುಟದ ಸದಸ್ಯರಾದ ವಿ.ಶಿವನ ಕುಟ್ಟಿ, ಸಾಜಿ ಚೆರಿಯನ್, ಜಿ.ಆರ್.ಅನಿಲ್, ಲೇಖಕ ದೇವದತ್ ಪಟ್ಟನಾಯಕ್ ಅವರು ಉಪಸ್ಥಿತರಿದ್ದರು.

ಈ ಸಂದರ್ಭಲ್ಲಿ ಲೇಖಕ ಎಂ.ಮುಕುಂದನ್ ಅವರನ್ನು ಸನ್ಮಾನಿಸಲಾಯಿತು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ ವಿಜಯಪುರದ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.