ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ : ಕೊಪ್ಪಳದಲ್ಲಿ ಮಾರ್ಚ್ ೯ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Feb 28, 2025 - 22:55
 0
ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ : ಕೊಪ್ಪಳದಲ್ಲಿ ಮಾರ್ಚ್ ೯ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿAದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾ.೯ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.
ಪ್ರಶಸ್ತಿಗಳ ವಿವರ ಇಂತಿದೆ. ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ: ಸುಬ್ಬು ಹೊಲೆಯಾರ್,  ಡಿ.ವಿ.ಜಿ.ಪ್ರಶಸ್ತಿ : ರಾಘವೇಂದ್ರ ಗಣಪತಿ, ವಿಜಯವಾಣಿ, ಬೆಂಗಳೂರು, ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಜಿ.ಯು.ಭಟ್, ಉದಯವಾಣಿ, ಹೊನ್ನಾವರ. ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಅನು ಶಾಂತರಾಜು, ಹಿರಿಯ ಪೋಟೋ ಜರ್ನಲಿಸ್ಟ್, ತುಮಕೂರು, ಪಾಟೀಲ್ ಪುಟ್ಟಪ್ಪ(ಪಾಪು) ಪ್ರಶಸ್ತಿ: ಸುಭಾಷ್ ಹೂಗಾರ, ಹಿರಿಯ ಪತ್ರಕರ್ತರು., ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಂ.ಆರ್.ಸತ್ಯನಾರಾಯಣ, ಮೈಸೂರು. ಸಿ.ಆರ್.ಕೃಷ್ಣರಾವ್ ಪ್ರಶಸ್ತಿ: ಉಗಮ ಶ್ರೀನಿವಾಸ್, ಕನ್ನಡಪ್ರಭ.  ಶ್ರೀಮತಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ: ಮಂಜುಶ್ರೀ ಎಂ ಕಡಕೊಳ, ಪ್ರಜಾವಾಣಿ. ಬದರಿನಾಥ ಹೊಂಬಾಳೆ ಪ್ರಶಸ್ತಿ : ಗಂಗಹನುಮಯ್ಯ, ಅಮೃತವಾಣಿ, ತುಮಕೂರು, ಡಾ.ಎಂ.ಎA.ಕಲ್ಬುರ್ಗಿ ಪ್ರಶಸ್ತಿ: ಡಾ.ಸಿದ್ಧನಗೌಡ ಪಾಟೀಲ್, ಸಂಪಾದಕರು, ಹೊಸತು, ಕಿಡಿಶೇಷಪ್ಪ ಪ್ರಶಸ್ತಿ: ಮು.ವೆಂಕಟೇಶಯ್ಯ, ಸಿಂಹ ಬೆಂಗಳೂರು. ರವಿ ಬೆಳಗೆರೆ ಪ್ರಶಸ್ತಿ: ಎಂ.ಕೆ.ಹೆಗಡೆ, ಹಿರಿಯ ಪತ್ರಕರ್ತರು, ಬೆಳಗಾವಿ, ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ: ಎಂ.ಯೂಸುಫ್ ಪಟೇಲ್, ಹಿರಿಯ ಪತ್ರಕರ್ತರು. ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ: ಬಸವರಾಜ ಹೆಗ್ಗಡೆ, ಸಂಜೆ ಮಿತ್ರ, ಮಂಡ್ಯ, ರಾಜಶೇಖರ ಕೋಟಿ ಪ್ರಶಸ್ತಿ: ಕೆ.ಕೆ.ಬೋಪಣ್ಣ, ಆಂದೋಲನ, ಕೊಡಗು, ಪಿ.ರಾಮಯ್ಯ ಪ್ರಶಸ್ತಿ: ಎಸ್.ಟಿ.ರವಿಕುಮಾರ್, ಸ್ಟಾರ್ ಆಪ್ ಮೈಸೂರು. ಮಾ. ರಾಮಮೂರ್ತಿ ಸ್ಮಾರಕ ಪ್ರಶಸ್ತಿ: ತಾ.ನಂ. ಕುಮಾರಸ್ವಾಮಿ, ಆನೆಕಲ್, ಮಹದೇವ ಪ್ರಕಾಶ್ ಪ್ರಶಸ್ತಿ: ಪ್ರಭುಲಿಂಗ ನಿಲೂರೆ, ವಿಜಯ ಕರ್ನಾಟಕ, ಕಲಬುರ್ಗಿ, ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ: ಚಂದ್ರಶೇಖರ ಶೃಂಗೇರಿ, ಶಿವಮೊಗ್ಗ,  ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ಗಿರೀಶ್ ಉಮ್ರಾಯಿ, ಶಿವಮೊಗ್ಗ, ಎಂ.ನಾಗೇAದ್ರ ರಾವ್ ಪ್ರಶಸ್ತಿ: ಕೆ.ಬಿ.ಜಗದೀಶ್, ಸಂಜೆವಾಣಿ, ಕೋಲಾರ, ಶ್ರೀಮತಿ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ: ಕವಿತ, ಸಂಯುಕ್ತ ಕರ್ನಾಟಕ. ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ: ಗಣೇಶ್ ಕಾಸರಗೋಡು, ಹಿರಿಯ ಪತ್ರಕರ್ತರು, ಮೂಡಣ, ಹಾವೇರಿ ಪ್ರಶಸ್ತಿ: ಎಂ.ಚಿರAಜೀವಿ, ಹಿರಿಯ ಪತ್ರಕರ್ತರು, ಹಾವೇರಿ, ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗಳು: ರಂಗನಾಥ್ ಎಸ್ ಭಾರದ್ವಾಜ್- ಟಿವಿ೯ ರಮಾಕಾಂತ್-ಟಿವಿ೫, ಶ್ರೀನಿವಾಸ್-ಬೆಂಗಳೂರು. ಬಿ.ಪಿಳ್ಳರಾಜು, ಕನ್ನಡ ಪ್ರಭ, ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ. ಬಾಸ್ಕರ ರೈ ಕಟ್ಟ,-ಮಂಗಳೂರು, ಗುರುಶಾಂತ.ಎನ್. -ಬಳ್ಳಾರಿ, ಎಸ್.ಎಂ.ಮನೋಹರ- ಹೊಸಪೇಟೆ, ವಿಜಯನಗರ. ಸಿ.ಬಿ.ಸುಬೇದಾರ್- ನರಗುಂದ, ಗದಗ, ನಾಗೇಂದ್ರ- ಶಹಾಪುರ, ಯಾದಗಿರಿ, ಡಿ.ಜಿ.ರಾಜಗೋಪಾಲ್- ಹಾಸನ, ಮಂಜುನಾಥ್ ಜೆ -ಚಳ್ಳಕೆರೆ, ಚಿತ್ರದುರ್ಗ.
Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.