ಸಂಗಮೇಶ ಜಂಗಮಶೆಟ್ಟಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನ

Oct 1, 2024 - 20:57
 0
ಸಂಗಮೇಶ ಜಂಗಮಶೆಟ್ಟಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನ
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ರೋಣಿಹಾಳ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ಶಿಕ್ಷಕ ಸಂಗಮೇಶ ಜಂಗಮಶೆಟ್ಟಿ ಅವರಿಗೆ ಬೆಂಗಳೂರಿನ ಜನಸಿರಿ ಪೌಂಡೇಶನ ವತಿಯಿಂದ ಪುಟ್ಟಣ್ಣ ಚೆಟ್ಟಿ ಪುರಭವನ (ಬೆಂಗಳೂರ)ದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಶಿಕ್ಷಕರ ಹಬ್ಬ 2024 ಸಮಾರಂಭದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ಬಸವನಬಾಗೇವಾಡಿ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ರೋಣಿಹಾಳ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ಶಿಕ್ಷಕ ಸಂಗಮೇಶ ಜಂಗಮಶೆಟ್ಟಿ ಅವರಿಗೆ ಬೆಂಗಳೂರಿನ ಜನಸಿರಿ ಪೌಂಡೇಶನ ವತಿಯಿಂದ ಪುಟ್ಟಣ್ಣ ಚೆಟ್ಟಿ ಪುರಭವನ (ಬೆಂಗಳೂರ)ದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಶಿಕ್ಷಕರ ಹಬ್ಬ 2024 ಸಮಾರಂಭದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ.

ಗುಣಾತ್ಮಕ ಶಿಕ್ಷಣ ಹೆಚ್ಚಿಸುತ್ತಾ ತಾಲ್ಲೂಕ, ಜಿಲ್ಲಾ, ರಾಜ್ಯ ಹಾಗೂ ಅಂತರಾಜ್ಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿ ಹಲವಾರು ಶಿಕ್ಷಕರಿಗೆ ಕಾರ್ಯಗಾರ ನೀಡಿ ಗುಣಾತ್ಮಕ ಶಿಕ್ಷಣ ಹೆಚ್ಚಿಸಲು ಶ್ರಮ ವಹಿಸಿದ್ದಾರೆ. ಇವರಿಗೆ ಅಧಿಕಾರಿಗಳು, ಶಿಕ್ಷಕರು ಶುಭ ಹಾರೈಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶೈಕ್ಷಣಿಕವಾಗಿ ಅಭಿವೃದ್ಧಿ ಮಾಡಿದ 131 ಅತ್ಯುತ್ತಮ ಶಿಕ್ಷಕರನ್ನು ಗುರ್ತಿಸಿ ಜನಸಿರಿ ತಂಡದ ಮುಖ್ಯಸ್ಥ ನಾಗಲೇಖ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯಿಂದ ಶಿಕ್ಷಕರಾದ ಪರಮೇಶ್ವರ ಗದ್ಯಾಳ, ಈರಣ್ಣಾ ಹೊಸಟ್ಟಿ, ರೇಷ್ಮಾ ಪವಾರ, ಸಚಿನ ತಳವಾರ ಪ್ರಶಸ್ತಿಗೆ ಭಾಜನರಾದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.