ಮಾ.೧ ರಂದು ಕುಡಿಯುವ ನೀರಿನ ಯೋಜನೆಗೆ ಚಾಲನೆ

Feb 27, 2025 - 22:30
 0
ಮಾ.೧ ರಂದು ಕುಡಿಯುವ ನೀರಿನ ಯೋಜನೆಗೆ ಚಾಲನೆ

ತಾಳಿಕೋಟೆ : ಪಟ್ಟಣದ ಜನರಿಗೆ ಕುಡಿಯುವ ನೀರಿನ ತೊಂದರೆ ಬಾರದ ಹಾಗೆ ಮತ್ತು ದಿನ ೨೪ ಗಂಟೆಯು ಕುಡಿಯುವ ನೀರು ಒದಗಿಸುವ ಕೇಂದ್ರ ಪುರಸ್ಕೃತ ಅಮೃತ ೨.೦ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ವಿತರಣಾ ವ್ಯವಸ್ಥೆಯ ಕಾಮಗಾರಿಗೆ ಇದೇ ದಿ.೧ ಶನಿವಾರರಂದು ಚಾಲನೆ ನೀಡಲಾಗುತ್ತಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಅವರು ತಿಳಿಸಿದರು.               

ಗುರುವಾರರಂದು ಪಟ್ಟಣದ ಪುರಸಭೆಯ ಸಭಾ ಭವನದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಕರ್ನಾಟಕ ಸರ್ಕಾರ ಜಿಲ್ಲಾಡಳಿತ ವಿಜಯಪುರ, ನರಗರಾಭಿವೃದ್ದಿ ಇಲಾಖೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪುರಸಭೆ ತಾಳಿಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚೀವರಾದ ಡಾ.ಎಂ.ಬಿ.ಪಾಟೀಲ ಅವರು ಆಗಮಿಸಿ ಭೂಮಿ ಪೂಜೆಯನ್ನು ನೇರವೇರಿಸಲಿದ್ದಾರೆ. ಈ ಸಮಯದಲ್ಲಿ ನಗರಾಭಿವೃದ್ದಿ ಮತ್ತು ನಗರ ಯೋಜನೆ ಒಳಚರಂಡಿ ಮಂಡಳಿ ಸಚೀವರಾದ ಬೈರತಿ ಸುರೇಶ ಅವರು ಉಪಸ್ಥಿತರಿರಲಿದ್ದಾರೆಂದರು.        

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ ನಿಗಮ ಮಂಡಳಿಯ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಅಪ್ಪಾಜಿ ನಾಡಗೌಡ ಅವರು ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಜವಳಿ ಮತ್ತು ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ವಿಧಾನ ಪರಿಷತ್ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ನವದೇಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಧಾರವಾಡ ವಿಧಾನ ಸಭಾ ಶಾಸಕರಾದ ವಿನಯ ಕುಲಕರ್ಣಿ, ವಿಜಯಪುರ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ, ಸಂಸದರಾದ ಡಾ.ಸುಧಾ ಮೂರ್ತಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರಿ, ರವಿಕುಮಾರ ಎನ್, ಕೇಶವಪ್ರಸಾದ ಎಸ್, ಪುರಸಭಾ ಅಧ್ಯಕ್ಷೆ ಶ್ರೀಮತಿ ಜುಬೇದಾ ಹುಸೇನಬಾಶಾ ಜಮಾದಾರ, ಇವರಲ್ಲದೇ ವಿಶೇಷ ಅಹ್ವಾನಿತರಾಗಿ ಸರ್ಕಾರದ ಕಾರ್ಯದರ್ಶಿ ಜಿಲ್ಲಾ ಉಸ್ತುವಾರಿ ಉಜ್ವಲ್‌ಕುಮಾರ ಘೋಷ್, ಸರ್ಕಾರದ ಕಾರ್ಯದರ್ಶಿ ನಗರಾಭಿವೃದ್ದಿ ಇಲಾಖೆಯ ಶ್ರೀಮತಿ ದೀಪಾ ಚೋಳನ್, ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಸೆಲ್ವಮಣಿ ಆರ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಒಳಗೊಂಡು ಮಂಡಳಿಯ ಮುಖ್ಯ ಅಭಿಯಂತರರಾದ ವ್ಹಿ.ಎಲ್.ಚಂದ್ರಪ್ಪ, ಮಂಡಳಿಯ ಕಾರ್ಯಪಾಲಕ ಅಭಿಯಂತರ ಗೋವಿಂದ ಎಸ್, ಪುರಸಭೆ ಮುಖ್ಯಾಧಿಕಾರಿ ಮೋಹನ್ ಜಾಧವ ಅವರು ಉಪಸ್ಥಿತರಿರಲಿದ್ದಾರೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಅವರು ಹೇಳಿದರು.            ಈ ಸಮಯದಲ್ಲಿ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಜುಬೇದಾ ಜಮಾದಾರ, ಉಪಾಧ್ಯಕ್ಷೆ ಗೌರಮ್ಮ ಕುಂಭಾರ, ಸದಸ್ಯರಾದ ಅಣ್ಣಾಜಿ ಜಗತಾಪ, ಪರಶುರಾಮ ತಂಗಡಗಿ, ಡಿ.ವ್ಹಿ.ಪಾಟೀಲ, ಯಾಸೀನ ಮಮದಾಪೂರ, ಮುಸ್ತಫಾ ಚೌದ್ರಿ, ಅಕ್ಕಮಹಾದೇವಿ ಕಟ್ಟಿಮನಿ, ಮುತ್ತಪ್ಪ ಚಮಲಾಪೂರ, ಮುಖ್ಯಾಧಿಕಾರಿ ಮೋಹನ್ ಜಾಧವ, ಅಧಿಕಾರಿ ಮುತ್ತು, ಗುತ್ತಿಗೆದಾರ ಸುನೀಲ, ಮೊದಲಾದವರು ಇದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.