ಗ್ಯಾರಂಟಿ ಯೋಜನೆಗಳ ವ್ಯಾಪಕ ಜಾಗೃತಿ ಮೂಡಿಸಿ

Jan 8, 2025 - 23:39
 0
ಗ್ಯಾರಂಟಿ ಯೋಜನೆಗಳ ವ್ಯಾಪಕ ಜಾಗೃತಿ ಮೂಡಿಸಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ವಿಜಯಪುರ : ರಾಜ್ಯ ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿತು.        

ಸಭೆಯ ಪ್ರಾರಂಭದಲ್ಲಿ ಯುವ ನಿಧಿ ಯೋಜನೆಯ ಪೋಸ್ಟರ್ ಹಾಗೂ ಬ್ಯಾನರ್ಗಳನ್ನು ಉದ್ಘಾಟಿಸಲಾಯಿತು. ಸಮಿತಿಯ ಸಭೆಯಲ್ಲಿ ಎಸ್. ಆರ್. ಪಾಟೀಲರವರು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಅದರ ಹಿನ್ನೆಲೆಯನ್ನು, ಧ್ಯೇಯ ಉದ್ದೇಶಗಳನ್ನು ಸದಸ್ಯರಿಗೆ ವಿಸ್ತೃತವಾಗಿ ತಿಳಿಸಿದರು.                

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ೫ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದರು.                 ¸

Àರ್ಕಾರ ಜಾರಿಗೆ ತಂದಿರುವ ಈ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರುಗಳು ತಮ್ಮ ಹಂತದಲ್ಲಿ ವ್ಯಾಪಕವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಈ ಯೋಜನೆಗಳ ಅನುಷ್ಠಾದಿಂದ ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆಗಳ ಮೂಲಕ ಸರ್ಕಾರದ ಗಮನ ಸೆಳೆಯಲು ತಿಳಿಸಿದರು.                

ರಾಜ್ಯ ಮಟ್ಟದ ವಿಷಯಗಳ ಬಗ್ಗೆ ಈ ಸಭೆಯಲ್ಲಿ ಪ್ರಸ್ತಾಪಿಸುವುದು ಸೂಕ್ತ. ತಾಲೂಕು  ಮಟ್ಟದ ಹಾಗೂ ಜಿಲ್ಲಾ ಮಟ್ಟದ ವಿಷಯಗಳನ್ನು ನಮ್ಮ ಹಂತದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಇಲಿಯಾಸ್ ಅಹ್ಮದ ಬೋರಾಮಣಿ ಬಿನ್ ಮಹಿಬೂಬಸಾಬ ಬೋರಾಮಣಿ ಸದಸ್ಯರುಗಳಿಗೆ ಸಲಹೆ ನೀಡಿದರು.        

ಶಕ್ತಿ ಯೋಜನೆಗೆ ಹಾಗೂ ಅನ್ನಭಾಗ್ಯ ಯೋಜನೆಗೆ ಸಂಬAಧಿಸಿದAತೆ ಸದಸ್ಯರು ಗಮನಿಸಿದ ವಿಷಯಗಳಿಗೆ ಸಂಬAಧಸಿದAತೆ ಕೂಡಲೇ ಅಗತ್ಯ ಕ್ರಮ ವಹಿಸಿ ವರದಿ ಸಲ್ಲಿಸಲು ಸಂಬAಧಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಸೂಚನೆ ನೀಡಿದರು.                  

ಈ ಸಂದರ್ಭದಲ್ಲಿ ಜಿ.ಪಂ. ನ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ  ಉಪಾಧ್ಯಕ್ಷ ಸದ್ದಾಂ ಕುಂಟೋಜಿ, ಹೊನ್ನಮಲ್ಲ ಈಶಪ್ಪ ಸಾರವಾಡ, ಶ್ರೀಶೈಲ ಕವಲಗಿ, ಜಿಲ್ಲೆಯ ೧೩ ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ ವಿಜಯಪುರದ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.