ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಕೈ ಬಿಡದಂತೆ ಆಗ್ರಹಿಸಿ ಪ್ರತಿಭಟನೆ

Jan 22, 2025 - 08:06
 0
ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಕೈ ಬಿಡದಂತೆ ಆಗ್ರಹಿಸಿ ಪ್ರತಿಭಟನೆ

ವಿಜಯಪುರ :  ವಿಜಯಪುರ ಜಿಲ್ಲೆಯ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಕೈಬಿಡದಂತೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಂಡು ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.                

ರಾಜ್ಯದ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರೂ ವರ್ಷದಿಂದ ಗೌರವಧನದ ಆಧಾರದ ಮೇಲೆ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ೨೦೨೪-೨೫ನೇ ಸಾಲಿನಲ್ಲಿ ೧೦,೯೭೬ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಯುಜಿಸಿ ೨೦೧೮ ರ ಮಾರ್ಗಸೂಚಿ ಸೇವೆಯಿಂದ ಕೈಬಿಡದಂತೆ ಆಗ್ರಹಿಸಲಾಯಿತು.                 

ಪ್ರತಿಭಟನೆಯಲ್ಲಿ ನಾರಾಯಣ ಮುದ್ದೇಬಿಹಾಳ, ರಾಜಶೇಖರ ಕುದರಿ, ಸಾಜೀದ ರಿಸಾಲದಾರ, ತನ್ವೀರ ಗೋಡೆಸವಾರ, ಕುಮಾರಸ್ವಾಮಿ, ನಾಗರೆಡ್ಡಿ, ರಾಜು ಚವ್ಹಾಣ,ರಾಜಕುಮಾರ ದಯಗೊಂಡ, ಕಡೇಮನಿ, ಇನ್ನಿತರರು ಉಪಸ್ಥಿತರಿದ್ದರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.