ಸತತ ಅಧ್ಯಯನದಿಂದ ಸಾಧನೆ ಸಾಧ್ಯ ; ಹೊಸಮನಿ

Feb 27, 2025 - 22:13
 0
ಸತತ ಅಧ್ಯಯನದಿಂದ ಸಾಧನೆ ಸಾಧ್ಯ ; ಹೊಸಮನಿ

ವಿಜಯಪುರ : ಸತತ ಅಧ್ಯಯನದಿಂದ ಸಾಧನೆ ಸಾಧ್ಯ. ಏಕಾಗ್ರತೆಯಿಂದ ಸದಾ ಅಧ್ಯಯನ ಮಾಡಿದರೆ ಜ್ಞಾನ ವೃದ್ಧಿಯಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಡಾ. ಸಿ. ಕೆ. ಹೊಸಮನಿ ಅಭಿಪ್ರಾಯ ವ್ಯಕ್ತಪಡಿಸಿದರು.             

ಅವರು ಚೇತನಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಚೇತನಾ ಪಿಯು ಸೈನ್ಸ್ ಮತ್ತು ಕಾಮರ್ಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಶುಭ ಹಾರೈಕೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.            ಚೇತನಾ ಪಿಯು ಸೈನ್ಸ್ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇಲ್ಲಿ ಸೈನ್ಸ್ ಕಲಿತ ಅನೇಕ ವಿದ್ಯಾರ್ಥಿಗಳು ಎಇಇ, ಏ-ಅಇಖಿ, ಓಇಇಖಿ ಪರೀಕ್ಷೆ ಪಾಸ್ ಆಗೋದರ ಮೂಲಕ ಇಂಜಿನಿಯರಿAಗ್ ಕೋರ್ಸ್ ಮತ್ತು ಎಂ.ಬಿ.ಬಿ.ಎಸ್. ಕೋರ್ಸ್ಗೆ ಆಯ್ಕೆಯಾಗುತ್ತಾರೆ. ವಿದ್ಯಾರ್ಥಿಗಳು ಉತ್ತಮ ಜ್ಞಾನವನ್ನು ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.                

ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಪ್ರಕಾಶ ಗೊಂಗಡಿ ಮಾತನಾಡಿ ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಒಳ್ಳೆಯ ಸಂಸ್ಕಾರವನ್ನು ಹೊಂದಬೇಕೆAದು ಹೇಳಿದರು.                    

ಸಂಸ್ಥೆಯ ಅಧ್ಯಕ್ಷ ರಾಜಶ್ರೀ ಜುಗತಿ ಮಾತನಾಡಿ ಮಕ್ಕಳಲ್ಲಿ ಶಿಸ್ತು ಮತ್ತು ಏಕಾಗ್ರತೆ ಇರಬೇಕು. ಗುರಿ ಸಾಧಿಸುವ ಛಲ ಇದ್ದರೆ ಸಾಧನೆ ಶತಸಿದ್ಧ ಎಂದು ಹೇಳಿದರು. ಸಂಸ್ಥೆಯ ಉಪಾಧ್ಯಕ್ಷ ರೋಹಿತ ಜುಗತಿ, ಸ್ನೇಹಾ ಜುಗತಿ, ನಿರ್ದೇಶಕ ನಾಗರಾಜ ಹೇರಲಗಿ ಸಹಾಯಕ ಆಡಳಿತ ಅಧಿಕಾರಿ ಪ್ರಮೋದ ಕುಲಕರ್ಣಿ, ಪ್ರಾಚಾರ್ಯ ವಿಶ್ವನಾಥ ದಾಬಡೆ, ಜಮೀಲ್ ಜಹಾಗಿರದಾರ್, ಶ್ರೀ ಸದಾನಂದ  ರೂಡಗಿ, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಸಮೂಹ ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.