ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಶಿಕ್ಷಣ ರಾಜ್ಯ ಮಟ್ಟದ ಉಪನ್ಯಾಸ

Feb 3, 2025 - 22:44
 0
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ  ವೈದ್ಯಕೀಯ ಶಿಕ್ಷಣ ರಾಜ್ಯ ಮಟ್ಟದ ಉಪನ್ಯಾಸ
ದಿ. ಡಾ. ಆರ್. ಸಿ. ಬಿದರಿ ಅವರ ಸ್ಮರಣಾರ್ಥ ಕ್ಯಾನ್ಸರ್ ಕುರಿತು ಮುಂದುವರೆದ ವೈದ್ಯಕೀಯ ಶಿಕ್ಷಣ ರಾಜ್ಯ ಮಟ್ಟದ ಉಪನ್ಯಾಸ ಕಾರ್ಯಕ್ರಮ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸಿಕಂದರಾಬಾದಿನ ರೇನೋವಾ ಸೌಮ್ಯ ಕ್ಯಾನ್ಸರ್ ಸೆಂಟರ್ ನ ಮೆಡಿಕಲ್ ಅಂಕೋಲಾಜಿ ವಿಭಾಗದ ನಿರ್ದೇಶಕ ಮತ್ತು ಮುಖ್ಯಸ್ಥ ಡಾ. ಪಿ. ಎಸ್. ದತ್ತಾತ್ರೇಯ ಉದ್ಘಾಟಿಸಿದರು. ಆಶಾ ಎಂ. ಪಾಟೀಲ, ಡಾ. ವೈ. ಎಂ. ಜಯರಾಜ, ಡಾ. ಆರ್. ಎಸ್. ಮುಧೋಳ, ಡಾ. ಆರ್. ವಿ. ಕುಲಕರ್ಣಿ, ಮುಂತಾದವರು ಉಪಸ್ಥಿತರಿದ್ದರು.

ವಿಜಯಪುರ : ದಿ. ಡಾ. ಆರ್. ಸಿ. ಬಿದರಿ ಅವರ ಸ್ಮರಣಾರ್ಥ ಕ್ಯಾನ್ಸರ್ ಕುರಿತು ಮುಂದುವರೆದ ವೈದ್ಯಕೀಯ ಶಿಕ್ಷಣ ರಾಜ್ಯ ಮಟ್ಟದ ಉಪನ್ಯಾಸ ಕಾರ್ಯಕ್ರಮ ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಿತು.

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಿಕಂದರಾಬಾದಿನ ರೇನೋವಾ ಸೌಮ್ಯ ಕ್ಯಾನ್ಸರ್ ಸೆಂಟರ್ ನ ಮೆಡಿಕಲ್ ಅಂಕೋಲಾಜಿ ವಿಭಾಗದ ನಿರ್ದೇಶಕ ಮತ್ತು ಮುಖ್ಯಸ್ಥ  ಡಾ. ಪಿ. ಎಸ್. ದತ್ತಾತ್ರೇಯ ಉದ್ಘಾಟಿಸಿದರು.

ವೈದ್ಯಕೀಯ ಶಾಸ್ತ್ರ ವಿಭಾಗದ ಪ್ರೊ. ಡಾ. ಆರ್. ಸಿ. ಬಿದರಿ ಪ್ರಾಸ್ತಾವಿಕ ಮಾತನಾಡಿದರು.

ಡಾ. ಸಿ. .ಆರ್. ಬಿದರಿ ಸ್ಮಾರಕ ದತ್ತಿ ವತಿಯಿಂದ ಆಯೋಜಿಸಲಾಗಿದ್ದ ಈ ಉಪನ್ಯಾಸದಲ್ಲಿ ಮುಂಬೈ ಮತ್ತು ಹೈದ್ರಾಬಾದ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸುಮಾರು 400 ಪ್ರತಿನಿಧಿಗಳು ಪಾಲ್ಗೊಂಡಿದ್ದರು.  ಸುಮಾರು 1300 ಜನ ಕಾರ್ಯಕ್ರಮಕ್ಕೆ ಆನಲೈನ್ ನೊಂದಣಿ ಮಾಡಿದ್ದು ಗಮನಾರ್ಹವಾಗಿದೆ.

ಈ ಸಂದರ್ಭದಲ್ಲಿ ವಿಜಯೇಂದ್ರ ಬಿದರಿ, ಡಾ. ಆರ್. ಸಿ. ಬಿದರಿ, ಆಶಾ.ಎಂ.ಪಾಟೀಲ, ಡಾ. ಶೈಲಜಾ ಬಿದರಿ, ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ,  ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಕಾಲೇಜಿನ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಸ್. ಎನ್. ಬೆಂಟೂರ, ಡಾ. ತೇಜಸ್ವಿನಿ ಮುಂತಾದವರು ಉಪಸ್ಥಿತರಿದ್ದರು.

ಬಿ. ಎಲ್. ಡಿ. ಇ ಡೀಮ್ಡ್ ವಿವಿಯ ಸಮ ಕುಲಾಧಿಪತಿ ಡಾ. ವೈ.ಎಂ. ಜಯರಾಜ್ ಅವರು ಸ್ವಾಗತ ಭಾಷಣ ಮಾಡಿದರು. ಕುಲಪತಿ ಡಾ. ಆರ್. ಎಸ್. ಮುಧೋಳ ಅಧ್ಯಕ್ಷತೆ ವಹಿಸಿದ್ದರು. ರಜಿಸ್ಟ್ರಾರ ಡಾ. ಆರ್. ವಿ. ಕುಲಕರ್ಣಿ ವಂದಿಸಿದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.