ಸಮಾಜದ ಸಮಗ್ರ ಅಭಿವೃದ್ಧಿಗೆ ಮಹಿಳೆಯರು ಸ್ವಾವಲಂಬಿಯಾಗಿ

ವಿಜಯಪುರ: ಮಹಿಳೆಯರು ಸ್ವಾವಲಂಬಿಯಾಗುವುದು ಸಮಾಜದ ಸಮಗ್ರ ಅಭಿವೃದ್ಧಿಗೆ ಬಹಳ ಮುಖ್ಯ ಎಂದು ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಐ.ಎಸ್. ವಿದ್ಯಾಸಾಗರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಬುಧವಾರ ಆಯೋಜಿಸಿದ್ದ ‘ಮಹಿಳೆಯರ ವಿಮೋಚನೆಗೆ ಡಾ. ಬಿ.ಆರ್. ಅಂಬೇಡ್ಕರವರ ಕೊಡುಗೆಗಳು’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತವು ವಿವಿಧ ಜನಾಂಗ ಮತ್ತು ಧರ್ಮಗಳಿಂದ ಕೂಡಿದ ರಾಷ್ಟçವಾಗಿದ್ದು, ಇತಿಹಾಸದಲ್ಲಿ ಮಹಿಳೆಯರು ಪಿತೃಪ್ರಧಾನ ವ್ಯವಸ್ಥೆಯಿಂದ ಶೋಷಣೆಗೆ ಒಳಗಾಗಿದ್ದಾರೆ. ಈ ಶೋಷಣೆಯನ್ನು ತೊಡೆದುಹಾಕಲು ಮತ್ತು ಮಹಿಳೆಯರ ಸಬಲಿಕರಣಕ್ಕೆ ಪೂರಕವಾಗಿ ಹಲವು ಮಹಾನುಭಾವರು ಶ್ರಮಿಸಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ಪದವಿ (ಎನ್.ಇ.ಪಿ) ವಿಭಾಗ ವಿಶೇಷಾಧಿಕಾರಿ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ವಿದ್ಯಾರ್ಥಿನಿಯರಿಗೆ ಸಾಮಾಜಿಕ ಮಹಿಳಾ ಸ್ಥಾನಮಾನ ಮತ್ತು ಕಾಯ್ದೆ ಕಾನೂನುಗಳ ಕುರಿತು ತಿಳಿಸಿದರು.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕ ಜಗದೀಶ ಜಾವೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು.