ವಿದ್ಯಾರ್ಥಿಗಳು ಯುವನಿಧಿ ಯೋಜನೆಯ ಲಾಭ ಪಡೆದುಕೊಳ್ಳಿ

ವಿಜಯಪುರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಯುವನಿಧಿ ಯೋಜನೆ”ಯ ವ್ಯಾಪಕ ಪ್ರಚಾರಕ್ಕಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿಜಯಪುರ ರವರ ಸಹಯೋಗದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನಲ್ಲಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ ಪಂಚಗ್ಯಾರAಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾಜಶೇಖರ ಅವಜಿ ಮಾತನಾಡಿ ಯುವನಿಧಿ ಯೋಜನೆ ಅಡಿ ಪದವಿಧರರಿಗೆ ರೂ.೩೦೦೦ ಮತ್ತು ಡಿಪ್ಲೋಮಾದಾರರಿಗೆ ರೂ.೧೫೦೦ ಸರಕಾರ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯ ತರಬೇತಿ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ತಿಳಿಸಿದರು.
ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಂಜುಕುಮಾರ ಚವ್ಹಾಣ ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಯುವನಿಧಿ ಯೋಜನೆಯಡಿ ಹೆಸರು ನೋಂದಾಯಿಸಿ ಸರಕಾರದ ಲಾಭವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪ್ಲೇಸಮೆಂಟ ಅಧಿಕಾರಿಗಳಾದ ಬಂದೇನವಾಜ ದೇಸಾಯಿ ನಿರೂಪಿಸಿ, ಜಿಲ್ಲಾ ಉದ್ಯೋಗಾಧಿಕಾರಿ ಮಹೇಶ. ಜೆ.ಮಾಳವಾಡೇಕರ ವಂದಿಸಿದರು. ಕಾರ್ಯಕ್ರಮದಲ್ಲಿ ವಿಜಯಪುರ ತಾಲೂಕಿನ ಪಂಚಗ್ಯಾರAಟಿ ಸದಸ್ಯರುಗಳಾದ ಮಾರುತಿ ಸುಬೇದಾರ, ಪರುಶುರಾಮ ವಾಲೀಕಾರ, ಹಮೀದಾ ಪಟೇಲ, ಮಾಹಾದೇವ ಕವಲಗಿ, ಕಾಲೇಜು ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.