ಕವಿ ವಿಶ್ವಾಸ್. ಡಿ. ಗೌಡರ "ನೆನಪುಗಳ ಖಾತೆ" ಕೃತಿ ಲೋಕಾರ್ಪಣೆ

Jan 11, 2025 - 22:46
 0
ಕವಿ ವಿಶ್ವಾಸ್. ಡಿ. ಗೌಡರ  "ನೆನಪುಗಳ ಖಾತೆ" ಕೃತಿ ಲೋಕಾರ್ಪಣೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಆಲೂರು : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.), ಬೆಂಗಳೂರು ಕೇಂದ್ರ ಸಮಿತಿಯ ಮಾರ್ಗದರ್ಶನ ದಲ್ಲಿ 2025 ಜ.12 ಭಾನುವಾರ ದಂದು ಆಲೂರು ತಾಲ್ಲೂಕಿನ ಹರಿಹಳ್ಳಿ ಯಲ್ಲಿ ಆಲೂರು ತಾಲ್ಲೂಕು ತೃತೀಯ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷ ಎಸ್.ವಿ.ಕೃಷ್ಣಗೌಡ ಮಣಿಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕಿನ ಹಿರಿಯ ಪತ್ರ ಕರ್ತೆ, ಲೇಖಕಿ ಲೀಲಾವತಿ ಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ರವಿ ನಾಕಲಗೂಡು ಉದ್ಘಾಟಿ ಸಲಿದ್ದು, ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಧ್ಯಕ್ಷತೆ ವಹಿಸಲಿ ದ್ದಾರೆ. 
ಸಾಹಿತಿ ಹಾಗೂ ಪತ್ರಕರ್ತ ನಾಗರಾಜ್ ಹೆತ್ತೂರುರವರು ಕವಿ ವಿಶ್ವಾಸ್ ಡಿ. ಗೌಡರವರ “ನೆನಪುಗಳ ಖಾತೆ" ಕೃತಿ ಲೋಕಾರ್ಪಣೆ ಮಾಡಲಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.